ADVERTISEMENT

ಪರಿಸರ ಸಂರಕ್ಷಣೆಗೆ ಬದ್ಧರಾಗಬೇಕು

ಉಡುಪಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸಲಹೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 7:05 IST
Last Updated 9 ಜೂನ್ 2021, 7:05 IST
ಉಡುಪಿಯ ಅಜ್ಜರಕಾಡಿನ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಗಿಡ ನೆಟ್ಟರು. ಶಾಸಕ ಕೆ.ರಘುಪತಿ ಭಟ್, ಡಾ.ನವೀನ್ ಭಟ್, ಬಿ.ಸದಾಶಿವ ಪ್ರಭು, ಡಾ.ನಾಗಭೂಷಣ ಉಡುಪ ಇದ್ದರು.
ಉಡುಪಿಯ ಅಜ್ಜರಕಾಡಿನ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಗಿಡ ನೆಟ್ಟರು. ಶಾಸಕ ಕೆ.ರಘುಪತಿ ಭಟ್, ಡಾ.ನವೀನ್ ಭಟ್, ಬಿ.ಸದಾಶಿವ ಪ್ರಭು, ಡಾ.ನಾಗಭೂಷಣ ಉಡುಪ ಇದ್ದರು.   

ಉಡುಪಿ: ‘ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳ ಅವರಣದಲ್ಲಿ ಲಭ್ಯವಿರುವ ಸ್ಥಳಗಳಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲ ಅಧಿಕಾರಿಗಳು ಬದ್ಧರಾಗಬೇಕು’ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಇಲ್ಲಿನ ಅಜ್ಜರಕಾಡಿನ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಟ್ಟು ಅವರು ಮಾತನಾಡಿದರು.

ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಗಿಡ ಮರಗಳನ್ನು ಉಳಿಸಿ, ಬೆಳೆಸುವುದು ಅತ್ಯಂತ ಅವಶ್ಯ. ಪ್ರತಿಯೊಬ್ಬರೂ ತಮ್ಮ ಮನೆಗಳ ಆವರಣದಲ್ಲಿ ಗಿಡಗಳನ್ನು ನೆಡಬೇಕು, ಜತೆಗೆ ಪೋಷಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಗಿಡಗಳನ್ನು ನಡೆಸುವ ಕುರಿತು ಎಲ್ಲ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ADVERTISEMENT

ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ರೋಗ ವಾಹಕ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ ಭಟ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ. ಪ್ರೇಮಾನಂದ, ಡಾ.ಎಂ .ಜಿ.ರಾಮ, ಡಾ. ರಾಮರಾವ್, ಡಾ. ಚಿದಾನಂದ ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.