
ಪ್ರತಾಪಸಿಂಹ ನಾಯಕ್
ಉಡುಪಿ: ರಾಜ್ಯದ ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಅವರ ರಕ್ಷಣೆಯಲ್ಲಿ ತೊಡಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆರೋಪಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಬಕಾರಿ ಸಚಿವರು ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಆಗ್ರಹಿಸಿದರು.
ಈ ವಿಚಾರದಲ್ಲಿ ರಾಜ್ಯ ಸರ್ಕಾರವು ಭಂಡತನ ಪ್ರದರ್ಶಿಸುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಹೇಳಿದರು.
ಸರ್ಕಾರದಲ್ಲಿ ಅವ್ಯವಹಾರ ಮೀತಿ ಮೀರಿದ್ದು, ಜನರು ಸರ್ಕಾರವನ್ನು ಇಳಿಸಲು ಕಾಯುತ್ತಿದ್ದಾರೆ ಎಂದರು.
ಪತ್ರಿಕಾಗೋಷ್ಠೀಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಾಪು, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ, ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.