ADVERTISEMENT

ನಕಲಿ ಪತ್ರಕರ್ತರ ವಿರುದ್ಧ ಕ್ರಮಕ್ಕೆ ಎಸ್‌ಪಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2023, 16:26 IST
Last Updated 30 ಮಾರ್ಚ್ 2023, 16:26 IST
ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಅವರಿಗೆ ಮನವಿ ಸಲ್ಲಿಸಿತು.
ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಅವರಿಗೆ ಮನವಿ ಸಲ್ಲಿಸಿತು.   

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಅವರಿಗೆ ಮನವಿ ಸಲ್ಲಿಸಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುಮಾರು 170 ಮಂದಿ ಸದಸ್ಯರಿದ್ದು ವೃತ್ತಿ ನಿರ್ವಹಿಸುತ್ತಿದ್ದಾರೆ. ಈಚೆಗೆ ಕೆಲವು ವ್ಯಕ್ತಿಗಳು ಪತ್ರಕರ್ತರ ಸಂಘ ಮತ್ತು ಪತ್ರಕರ್ತರ ಹೆಸರಿನಲ್ಲಿ ಹಣ ವಸೂಲಿ ಮಾಡುವ, ಬೆದರಿಸುವ ದೂರುಗಳು ಸಂಘಕ್ಕೆ ಬಂದಿರುವ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಎಸ್‌ಪಿ ಅವರಿಗೆ ಮನವಿಯಲ್ಲಿ ಒತ್ತಾಯಿಸಲಾಯಿತು.

ಯಾವುದೇ ಪತ್ರಿಕೆ ಹಾಗೂ ಟಿವಿಯಲ್ಲಿ ಸುದ್ದಿ ಪ್ರಕಟಿಸಲು, ಪ್ರಸಾರ ಮಾಡಲು ಸಾರ್ವಜನಿಕರು ಹಣ ನೀಡಬೇಕಾದ ಅಗತ್ಯ ಇಲ್ಲ. ಸುದ್ದಿಯ ಹೆಸರಿನಲ್ಲಿ ಹಣ ವಸೂಲಿ ಮಾಡಿದವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು. ವಾಹನಗಳಿಗೆ ಅನಧಿಕೃತವಾಗಿ ಮೀಡಿಯಾ, ಪ್ರೆಸ್ ಸ್ಟಿಕ್ಕರ್ ಹಾಕಿಕೊಂಡು ಓಡಾಡುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು.

ADVERTISEMENT

ಕಾರ್ಯನಿರತ ಸಂಘದಿಂದ ಸಂಘದಿಂದ ಸದಸ್ಯರಿಗೆ ಅಧಿಕೃತ ಗುರುತಿನ ಚೀಟಿ ಮತ್ತು ವಾಹನಗಳಿಗೆ ಮಿಡಿಯಾ ಸ್ಟಿಕ್ಕರ್ ನೀಡಲಾಗಿದ್ದು, ಅದರ ಹೊರತಾಗಿ ಇತರರು ಬಳಸಿದ್ದು ಕಂಡುಬಂದರೆ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಲಾಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ನೇತೃತ್ವದ ತಂಡದಲ್ಲಿ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಜತೆ ಕಾರ್ಯದರ್ಶಿ ರಹೀಂ ಉಜಿರೆ, ಪ್ರಮೋದ್ ಸುವರ್ಣ, ಪತ್ರಕರ್ತರಾದ ಪುಂಡಲೀಕ ಮರಾಠೆ, ಮೈಕಲ್ ರೋಡಿಗ್ರಸ್, ಹರೀಶ್ ಬಲಾಯಿಪಾದೆ, ಶಶಿಧರ ಮಾಸ್ತಿಬೈಲು, ದೀಪಕ್ ಜೈನ್, ದಿನೇಶ್, ಚೇತನ್ ಮಟಪಾಡಿ, ಅಶ್ವತ್ ಆಚಾರ್ಯ, ಜಸ್ಟಿನ್ ಡಿಸಿಲ್ವ, ಗೋಪಾಲಕೃಷ್ಣ ಪಾದೂರು, ರಕ್ಷಿತ್ ಬೆಳಪು, ನಾಗರಾಜ ರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.