ADVERTISEMENT

ಉಡುಪಿ: ಪ್ರಸಿದ್ಧ ಗಾಯಕ ಹಾರ್ಯಾಡಿ ಚಂದ್ರಶೇಖರ ಕೆದ್ಲಾಯ ನಿಧನ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 11:02 IST
Last Updated 24 ಜನವರಿ 2023, 11:02 IST
ಪ್ರಸಿದ್ಧ ಗಾಯಕ ಹಾರ್ಯಾಡಿ ಚಂದ್ರಶೇಖರ ಕೆದ್ಲಾಯ
ಪ್ರಸಿದ್ಧ ಗಾಯಕ ಹಾರ್ಯಾಡಿ ಚಂದ್ರಶೇಖರ ಕೆದ್ಲಾಯ   

ಉಡುಪಿ: ಪ್ರಸಿದ್ಧ ಗಾಯಕ ಹಾರ್ಯಾಡಿ ಚಂದ್ರಶೇಖರ ಕೆದ್ಲಾಯ (74) ಅವರು ಬ್ರಹ್ಮಾವರದ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯ ಸಂಸ್ಕಾರ ಬುಧವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹಂಗಾರಕಟ್ಟೆಯಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿ, ಮಂಗಳೂರಿನ ಕೆನರಾ ಹೈಸ್ಕೂಲ್‌ನಲ್ಲಿ ನಾಲ್ಕು ವರ್ಷ ಸೇವೆ ಸಲ್ಲಿಸಿದ್ದ ಅವರು, ಮುಂದೆ ಮೂರು ದಶಕಗಳ ಕಾಲ ಬ್ರಹ್ಮಾವರದ ನಿರ್ಮಲ ಪ್ರೌಢ ಶಾಲೆಯಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

ADVERTISEMENT

ಅಜಪುರ ಕರ್ನಾಟಕ ಸಂಘದ ಅಧ್ಯಕ್ಷರಾಗಿದ್ದರು. ಅಜಪುರ ಯಕ್ಷಗಾನ ಸಂಘದ ಸಕ್ರಿಯ ಸದಸ್ಯರಾಗಿದ್ದರು. ವಿವಿಧ ಸಂಘಟನೆಗಳ ನಾಟಕಗಳಲ್ಲಿ, ಮುಖ್ಯವಾಗಿ ಪ್ರೊ. ಉದ್ಯಾವರ ಮಾಧವ ಆಚಾರ್ಯರ ನೃತ್ಯರೂಪಕಗಳಲ್ಲಿ ಹಿನ್ನಲೆ ಗಾಯಕರಾಗಿ ರಂಗ ಪ್ರಸ್ತುತಿಯ ಯಶಸ್ಸಿಗೆ ಕಾರಣೀಕರ್ತರಾಗಿದ್ದರು.

ಗಮಕವಾಚನದಲ್ಲೂ ಪ್ರಸಿದ್ಧಿ ಪಡೆದಿದ್ದರು. ಬ್ರಹ್ಮಾವರ ತಾಲ್ಲೂಕು ಪ್ರಥಮ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಕೈಯ್ಯಾರ ಕಿಞ್ಞಣ್ಣ ರೈ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.