ಉಡುಪಿ: ಜಿಲ್ಲೆಯಲ್ಲಿ ಮತ್ತೆ ಶುಕ್ರವಾರ 15 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.
ಈಚೆಗೆ ಮುಂಬೈನಿಂದ ಬಂದು ಕ್ವಾರಂಟೈನ್‌ನಲ್ಲಿದ್ದ 9 ಪುರುಷರು, ನಾಲ್ವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಎಲ್ಲರನ್ನೂ ಡಾ.ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಸೋಂಕಿತರ ಸಂಖ್ಯೆ154ಕ್ಕೇರಿಕೆ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 154ಕ್ಕೇರಿಕೆಯಾಗಿದ್ದು, ಒಬ್ಬರು ಮೃತಪಟ್ಟು, ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 150 ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.