ಬ್ರಹ್ಮಾವರ: ಸಾಲಿಗ್ರಾಮ ವಲಯದ ಬ್ರಾಹ್ಮಣ ಮಹಾಸಭಾದ ಮೂಲಕ ಪಾರಂಪಳ್ಳಿ ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟಬಲ್ ಟ್ರಸ್ಟ್ ವತಿಯಿಂದ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಅನನ್ಯ ಭಟ್ ಅವರಿಗೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.
ಟ್ರಸ್ಟಿ ಸದಾಶಿವ ಮಧ್ಯಸ್ಥ, ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಂ.ಶಿವರಾಮ ಉಡುಪ, ಉಪಾಧ್ಯಕ್ಷ ಪಟ್ಟಾಭಿರಾಮ ಸೋಮಯಾಜಿ, ಸುಬ್ರಾಯ ಉರಾಳ ಭಾಗವಹಿಸಿದ್ದರು.
ಸಭಾದ ಕಾರ್ಯದರ್ಶಿ ಕೆ.ರಾಜಾರಾಮ ಐತಾಳ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.