ಉಡುಪಿ: ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪದಡಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಗೋಪಾಲ ಪೂಜಾರಿ ಸೇರಿದಂತೆ 20 ಕಾಂಗ್ರೆಸ್ ಮುಖಂಡರ ವಿರುದ್ಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ.12ರಂದು ಕೋಟತಟ್ಟು ಕೊರಗ ಕಾಲೊನಿಯಲ್ಲಿ ಕೊರಗರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ಮುಖಂಡರು ಮಣಿಪಾಲದ ಸಿಂಡಿಕೇಟ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.
ಈ ಸಂದರ್ಭ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಜಿಲ್ಲಾಡಳಿತ ನೀಡಿದ ದೂರಿನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದು ಮಣಿಪಾಲ ಪೊಲೀಸರು ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.