ADVERTISEMENT

ಮಣಿಪಾಲದ ರೆಸ್ಟೊರೆಂಟ್‌ನಲ್ಲಿ ಅಗ್ನಿ ಅವಘಡ

​ಪ್ರಜಾವಾಣಿ ವಾರ್ತೆ
Published 15 ಜುಲೈ 2022, 5:58 IST
Last Updated 15 ಜುಲೈ 2022, 5:58 IST
   

ಉಡುಪಿ: ಮಣಿಪಾಲ ಬಳಿಯ ಈಶ್ವರ ನಗರದಲ್ಲಿರುವ ಜನನಿ ಲಾಡ್ಜ್‌ನಲ್ಲಿರುವ ಫ್ಯಾಮಿಲಿ ರೆಸ್ಟೊರೆಂಟ್‌ನಲ್ಲಿ ಶುಕ್ರವಾರ ಮುಂಜಾನೆ ಬೆಂಕಿ ಅವಘಡ ಸಂಭವಿಸಿದೆ.

ಬೆಂಕಿಯ ಕೆನ್ನಾಲಗೆಗೆ ಇಡೀ ರೆಸ್ಟೋರೆಂಟ್‌ ಸುಟ್ಟುಹೋಗಿದೆ. ರೆಸ್ಟೊರೆಂಟ್‌ನಲ್ಲಿದ್ದ ಪೀಠೋಪಕರಣ, ಆಹಾರ ಪದಾರ್ಥಗಳು, ಮದ್ಯ ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಅಂದಾಜಿಸಲಾಗಿದೆ.

ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ. ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.