ADVERTISEMENT

ಉಡುಪಿ: ​ಫರ್ನಿಚರ್ ಮಳಿಗೆ, ಹೋಟೆಲ್‌ನಲ್ಲಿ ಬೆಂಕಿ ಅವಘಡ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 8:40 IST
Last Updated 21 ಏಪ್ರಿಲ್ 2022, 8:40 IST
   

ಉಡುಪಿ: ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿರುವ ಫರ್ನಿಚರ್‌ ಮಳಿಗೆ ಹಾಗೂ ಹೋಟೆಲ್‌ನಲ್ಲಿ ಗುರುವಾರ ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಗಳು ಬೆಂಕಿಗಾಹುತಿಯಾಗಿವೆ.

ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಸಂಕೀರ್ಣಕ್ಕೆ ವ್ಯಾಪಿಸಿದ್ದು, ಸುಧಾ ಫರ್ನಿಚರ್ ಮಳಿಗೆ ಸಂಪೂರ್ಣವಾಗಿ ಸುಟ್ಟುಹೋಗಿದೆ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಪ್ರಾಣ ಹಾನಿ ಸಂಭಿವಿಸಲ್ಲ.

ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.