ಧನ್ವಂತರಿ ಆಯುರ್ವೇದ ಆಸ್ಪತ್ರೆ
ಉಡುಪಿ: ನಗರದ ದೊಡ್ಡಣಗುಡ್ಡೆಯ ಬಬ್ಬುಸ್ವಾಮಿ ಗುಡಿಯ ಬಳಿಯ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ.
ಆಸ್ಪತ್ರೆಯ ನವೀಕರಣ ಕೆಲಸ ನಡೆಯುತ್ತಿದ್ದುದರಿಂದ ರೋಗಿಗಳು ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ.
ಆಸ್ಪತ್ರೆಯ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಹೊರಗೆ ಓಡಿ ಬಂದು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ದಳದ ಎರಡು ವಾಹನಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗಿದೆ.
ಆಸ್ಪತ್ರೆಯ ಬೆಡ್‌ಗಳು, ಔಷಧಗಳು ಸುಟ್ಟುಹೋಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.