ADVERTISEMENT

11 ಮೀನುಗಾರರ ರಕ್ಷಿಸಿದ ಕೋಸ್ಟ್ ಗಾರ್ಡ್‌

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 15:01 IST
Last Updated 15 ಸೆಪ್ಟೆಂಬರ್ 2021, 15:01 IST

ಉಡುಪಿ: ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕಾ ಬೋಟ್‌ನಲ್ಲಿ ಅಪಾಯಕ್ಕೆ ಸಿಲುಕಿದ್ದ 11 ಮೀನುಗಾರರನ್ನು ಭಾರತೀಯ ಕೋಸ್ಟ್‌ ಗಾರ್ಡ್‌ ರಕ್ಷಣೆ ಮಾಡಿದ್ದಾರೆ.

ಮೀನುಗಾರಿಕೆಗೆ ತೆರಳಿದ್ದ ಸಾಗರ್ ಸಾಮ್ರಾಟ್ ಎಂಬ ಬೋಟ್‌ ಸಮುದ್ರದಲ್ಲಿ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ಎಂಜಿನ್‌ ವಿಫಲವಾಗಿತ್ತು. ಬೋಟ್‌ನಲ್ಲಿದ್ದ ಸಿಬ್ಬಂದಿ ತುರ್ತು ಸಹಾಯಕ್ಕಾಗಿ ಎಂಆರ್‌ಸಿಸಿ ಕೇಂದ್ರಕ್ಕೆ ಮನವಿ ಮಾಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ರಾಜ್‌ದೂತ್ ಶಿಪ್‌ನೊಂದಿಗೆ ರಕ್ಷಣಾ ಕಾರ್ಯಾಚರಣೆಗೆ ತೆರಳಿದರು.

ಅಪಾಯಕ್ಕೆ ಸಿಲುಕಿದ್ದ 11 ಮೀನುಗಾರರ ಸಹಿತ ಬೋಟ್‌ ಅನ್ನು ಸುರಕ್ಷಿತವಾಗಿ ದಡ ಸೇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.