ADVERTISEMENT

ಉಡುಪಿಯಲ್ಲಿ ಮತ್ತೆ ಆರು ಕೊರೊನಾ ಶಂಕಿತರು ಆಸ್ಪತ್ರೆಗೆ ದಾಖಲು 

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 12:57 IST
Last Updated 17 ಮಾರ್ಚ್ 2020, 12:57 IST
   

ಉಡುಪಿ: ಜಿಲ್ಲೆಯಲ್ಲಿ ಮತ್ತೆ ಆರು ಜನರಲ್ಲಿ ಶಂಕಿತ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಐವರಿಗೆ ಜಿಲ್ಲಾ ಆಸ್ಪತ್ರೆ ಹಾಗೂ ಒಬ್ಬರಿಗೆ ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈಚೆಗೆ ದುಬೈನಿಂದ ಮರಳಿದ್ದ ಮೂವರಲ್ಲಿ ಜ್ವರ, ಕೆಮ್ಮು, ಕತಾರ್‌ನಿಂದ ಬಂದ ವ್ಯಕ್ತಿಗೆ ತಲೆನೋವು, ಜ್ವರ, ಕುವೈತ್‌ನಿಂದ ಮರಳಿದ್ದ ಮಹಿಳೆಗೆ ಕೆಮ್ಮು, ಗಂಟಲು ಕೆರೆತ ಹಾಗೂ ಕುಂದಾಪುರದ ವ್ಯಕ್ತಿಯಲ್ಲಿ ಶಂಕಿತ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು.

ಐವರಿಗೆ ಜಿಲ್ಲಾ ಆಸ್ಪತ್ರೆಯ ಐಸೋಲೇಷನ್‌ ವಾರ್ಡ್‌ನಲ್ಲಿ ಹಾಗೂ ಒಬ್ಬರಿಗೆ ಕುಂದಾಪುರದ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳ ಗಂಟಲಿನ ದ್ರವವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಬುಧವಾರ ವರದಿ ಬರುವ ನಿರೀಕ್ಷೆ ಇದೆ ಎಂದು ಡಿಎಚ್‌ಒ ಸುಧೀರ್ ಚಂದ್ರ ಸೂಡ ತಿಳಿಸಿದರು.

ADVERTISEMENT

ಸೋಮವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯ ಪರೀಕ್ಷಾ ವರದಿ ಕೂಡ ಬುಧವಾರ ಕೈಸೇರಲಿದೆ. ಇದುವರೆಗೂ ಜಿಲ್ಲೆಯಲ್ಲಿ ಕೋವಿಡ್‌–19 ಸೋಂಕು ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.