ADVERTISEMENT

ಉಡುಪಿ ಕೃಷ್ಣಮಠಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಭೇಟಿ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2023, 6:41 IST
Last Updated 19 ಮಾರ್ಚ್ 2023, 6:41 IST
ಉಡುಪಿ ಕೃಷ್ಣಮಠಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಭೇಟಿ
ಉಡುಪಿ ಕೃಷ್ಣಮಠಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಭೇಟಿ   

ಉಡುಪಿ: ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾನುವಾರ ಉಡುಪಿಯ ಕೃಷ್ಣ ಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು.

ಬಳಿಕ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಮಾಡಿ ಅನುಗ್ರಹ ಪ್ರಸಾದ ಸ್ವೀಕರಿಸಿದರು.
ನಂತರ ಅಮೃತ್ ಗಾರ್ಡನ್‌ನಲ್ಲಿ ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಟ್ಯಾಪ್ಮಿ ವಿಭಾಗ ಆಯೋಜಿಸಿದ್ದ ನಾಯಕತ್ವ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಧ್ಯಾಹ್ನ 3 ಗಂಟೆಗೆ ಮಣಿಪಾಲದ ಕಂಟ್ರಿಇನ್ ಹೋಟೆಲ್‌ನಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಪ್ರಬುದ್ಧರ ಸಮಾವೇಶದಲ್ಲಿ ಎಸ್‌.ಜೈಶಂಕರ್ ಭಾಗವಹಿಸಲಿದ್ದಾರೆ‌.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.