ADVERTISEMENT

ಭೂಕುಸಿತ, ಭೂಕಂಪನ ಅಧ್ಯಯನಕ್ಕೆ ನಾಲ್ಕು ಸಂಸ್ಥೆಗಳಿಗೆ ಸೂಚನೆ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 13 ಜುಲೈ 2022, 7:20 IST
Last Updated 13 ಜುಲೈ 2022, 7:20 IST
ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು.   

ಉಡುಪಿ: ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿರುವ ಭೂಕುಸಿತ ಹಾಗೂ ಭೂಕಂಪನ ಕುರಿತು ಅಧ್ಯಯನ ಮಾಡಿ ವರದಿ ನೀಡಲು ನಾಲ್ಕು ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಸಭೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಕರಾವಳಿ ಜಿಲ್ಲೆಗಳಲ್ಲಿ ಕಡಲ್ಕೊರೆತ ತಡೆಗೆ ಹೊಸ ತಂತ್ರಜ್ಞಾನ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ನೆರೆ ಹಾನಿ ಸಂಬಂಧ ತುರ್ತು ಹಾಗೂ ದೀರ್ಘಕಾಲೀನ ಕಾಮಗಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 10 ದಿನಗಳ ಬಳಿಕ ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಹಾನಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.