ADVERTISEMENT

ಉಚಿತ ಬಸ್ ಸೇವೆ ರಾಜ್ಯಕ್ಕೆ ಹೊಸ ಪ್ರಯೋಗ: ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 25 ಮೇ 2020, 10:34 IST
Last Updated 25 ಮೇ 2020, 10:34 IST
ಚಿತ್ರ( ಬಸ್) ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ಸೋಮವಾರ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರಂಭಿಸಲಾದ ಉಚಿತ ಬಸ್ಸಿನ ಸೇವೆಗೆ ಸಂಸದೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.
ಚಿತ್ರ( ಬಸ್) ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ಸೋಮವಾರ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರಂಭಿಸಲಾದ ಉಚಿತ ಬಸ್ಸಿನ ಸೇವೆಗೆ ಸಂಸದೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.   

ಬ್ರಹ್ಮಾವರ: ‘ಲಾಕ್‌ಡೌನ್ ಸಡಿಲಗೊಂಡ ನಂತರ ಹಲವಾರು ಚಟುವಟಿಕೆಗಳು ಆರಂಭಗೊಂಡಿದ್ದು, ಕೆಲಸ ಕಾರ್ಯಗಳಿಗೆ ತೆರಳುವ ಜನರ ಸಂಕಷ್ಟವನ್ನು ಅರಿತು, ಕೋವಿಡ್‌ ಸೋಂಕು ತಡೆ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಕೈಗೊಂಡ ಉಚಿತ ಬಸ್‌ ವ್ಯವಸ್ಥೆ ರಾಜ್ಯಕ್ಕೆ ಹೊಸ ಪ್ರಯೋಗ’ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಬ್ರಹ್ಮಾವರ ಬಸ್ ನಿಲ್ದಾಣದಲ್ಲಿ ಸೋಮವಾರ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರಂಭಿಸಲಾದ ಉಚಿತ ಬಸ್‌ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಕಡಿಯಾಳಿಯ ಗಣೇಶೋತ್ಸವ ಸಮಿತಿ ಸಹಯೋಗದಲ್ಲಿ ನಗರ ಸಭಾ ಸದಸ್ಯರು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳ ಸಹಕಾರದಲ್ಲಿ ಬಸ್‌ ಆರಂಬಿಸಲಾಗಿದೆ.

ಶಾಸಕ ರಘುಪತಿ ಭಟ್ ಮಾತನಾಡಿ, ‘ಪ್ರಾಯೋಗಿಕವಾಗಿ ಒಂದು ವಾರದ ಮಟ್ಟಿಗೆ ಉಚಿತ ಬಸ್‌ ವ್ಯವಸ್ಥೆ ಮಾಡಲಾಗಿದೆ. ಬಸ್‌ನಲ್ಲಿ ಅಂತರ, ಸ್ಯಾನಿಟೈಸರ್ ಬಳಕೆ, ಪ್ರಯಾಣಿಕರ ವಿವರಗಳನ್ನು ಪಡೆದುಕೊಳ್ಳವುದು ಮುಂತಾದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಕ್ಕೆ ಜನರು ಒಗ್ಗಿದ ನಂತರ ನಿರಂತರವಾಗಿ ಬಸ್‌ ಸಂಚಾರಕ್ಕೆ ಅವಕಾಶ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು’ ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ, ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.