ADVERTISEMENT

ಗಂಗೊಳ್ಳಿ: ಪೋಷಣ್ ಮಾಸಾಚರಣೆ ಕಾರ್ಯಕ್ರಮ.

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2025, 6:58 IST
Last Updated 14 ಅಕ್ಟೋಬರ್ 2025, 6:58 IST
ಕುಂದಾಪುರ ಸಮೀಪದ ಗಂಗೊಳ್ಳಿಯಲ್ಲಿ ಸೋಮವಾರ ವಿವಿಧ ಇಲಾಖೆಗಳ ಹಾಗೂ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಪೌಷ್ಟಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಕುಂದಾಪುರ ಸಮೀಪದ ಗಂಗೊಳ್ಳಿಯಲ್ಲಿ ಸೋಮವಾರ ವಿವಿಧ ಇಲಾಖೆಗಳ ಹಾಗೂ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಪೌಷ್ಟಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ನಡೆಯಿತು.   

ಕುಂದಾಪುರ: ಗಂಗೊಳ್ಳಿಯ ಸೀತಾರಾಮಚಂದ್ರ ಸಭಾಭವನದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಇಲಾಖೆ, ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಪೌಷ್ಟಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಶಾಸಕ ಗುರುರಾಜ್ ಗಂಟಿಹೊಳೆ ಮಾತನಾಡಿ, ಗಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ. ಯುವಜನರು ಸಾಂಪ್ರದಾಯಿಕ ಪೌಷ್ಟಿಕಾಂಶದ ಆಹಾರ ಸೇವನೆ ಬಿಟ್ಟು ಪಾಶ್ಚಿಮಾತ್ಯ ಆಹಾರದ ಕಡೆಗೆ ಒಲವು ತೋರುತ್ತಿದ್ದಾರೆ. ಇದರಿಂದ ರಕ್ತಹೀನತೆ, ಅಪೌಷ್ಟಿಕತೆ, ಬೊಜ್ಜುತನ ಉಂಟಾಗುತ್ತದೆ. ಈ ನೆಲೆಯಲ್ಲಿ ಕೇಂದ್ರ ಸರ್ಕಾರ ಆಹಾರ ಕ್ರಮಗಳ ಅರಿವು ಮೂಡಿಸಲು ಪೋಷಣ್ ಅಭಿಯಾನ ಜಾರಿಗೆ ತಂದಿದೆ ಎಂದರು.

ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ ಮಾತನಾಡಿ, ನಮ್ಮ ಹಿರಿಯರು ಸಾಂಪ್ರದಾಯಿಕ ಆಹಾರ ಪದ್ಧತಿ ಅನುಸರಿಸುತ್ತಿದ್ದರು. ನಮ್ಮ ಸುತ್ತಮುತ್ತ ಬೆಳೆಯುವ ಸೊಪ್ಪು– ತರಕಾರಿಗಳು ಪೋಷಕಾಂಶಗಳ ಆಗರ. ದಿನನಿತ್ಯದ ಆಹಾರದಲ್ಲಿ ಅವನ್ನು ಸೇವಿಸುವುದರಿಂದ ಪೌಷ್ಟಿಕಾಂಶಗಳ ಕೊರತೆ ಉಂಟಾಗುವುದಿಲ್ಲ. ಮಕ್ಕಳು, ಮಹಿಳೆಯರಿಗೆ ಮಾತ್ರವಲ್ಲದೆ ಪುರುಷರಿಗೂ ಪೌಷ್ಟಿಕಾಂಶಯುಕ್ತಳ ಆಹಾರ ಅವಶ್ಯ ಎಂದರು.

ADVERTISEMENT

ಕುಂದಾಪುರದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಟಿ.ಎಲ್. ಉಮೇಶ್ ಅವರು, ಸಾರ್ವಜನಿಕರಿಗೆ ಅಪೌಷ್ಟಿಕತೆ, ರಕ್ತಹೀನತೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದರು.

ಮಹಿಳೆಯರು ಮನೆಯಿಂದ ತಯಾರಿಸಿ ತಂದ ಪೌಷ್ಟಿಕಾಂಶಭರಿತ ತಿಂಡಿಗಳ ಪ್ರದರ್ಶನ ನಡೆಯಿತು. ಆಯ್ಕೆಯಾದ ತಿನಿಸುಗಳಿಗೆ ಬಹುಮಾನ ನೀಡಲಾಯಿತು. ಸೀಮಂತ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಂತಿ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶ್ಯಾಮಲಾ ಸಿ.ಕೆ, ಆರೋಗ್ಯ ಸಹಾಯಕ ಪ್ರಜ್ವಲ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ತಬ್ರೇಜ್, ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ, ರಾಜೇಂದ್ರ ಶೇರುಗಾರ್, ನಾಗರಾಜ್ ಖಾರ್ವಿ, ಸುಮಿತ್ರಾ ಜಿ, ಉಡುಪಿ ಸ್ತ್ರೀ ಶಕ್ತಿ ಒಕ್ಕೂಟದ ಕಾರ್ಯದರ್ಶಿ ಪ್ರೇಮ ಮಂಜುನಾಥ್ ಭಾಗವಹಿಸಿದ್ದರು.

ಗಂಗೊಳ್ಳಿ ವಲಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಒಕ್ಕೂಟದ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು. ಗಂಗೊಳ್ಳಿ ವಲಯ ಮೇಲ್ವಿಚಾರಕಿ ರೇಖಾ ಕೆ. ಸ್ವಾಗತಿಸಿದರು, ಫಿಲೋಮಿನಾ ಫರ್ನಾಂಡಿಸ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.