ಉಡುಪಿ: ಮಣಿಪಾಲದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 1 ಕೆ.ಜಿ 140 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಶಿವಳ್ಳಿ ಗ್ರಾಮದ ವ್ಯಾಲಿವ್ಯೂ ಕೌಂಟಿ ಕ್ಲಬ್ ಬಳಿ ಬುಧವಾರ ಗಾಂಜಾ ಮಾರಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಡುಪಿ ಡಿಸಿಐಬಿ ಇನ್‌ಸ್ಪೆಕ್ಟರ್ ಡಿ.ಆರ್.ಮಂಜಪ್ಪ ನೇತೃತ್ವದ ತಂಡ ಅಬ್ದುಲ್ ರೌಫ್ ಹಾಗೂ ಅಫ್ತಾಬ್ ಅಲಿ ಎಂಬುವರನ್ನು ಬಂಧಿಸಿದೆ.
ಬಂಧಿತರಿಂದ ಗಾಂಜಾ, ಎರಡು ಮೊಬೈಲ್, ಸ್ಕೂಟರ್ ಸೇರಿ ₹ 1.45 ಲಕ್ಷ ಮೌಲ್ಯದ ಸ್ವತ್ತುಗಳನ್ನು ಪಶಪಡಿಸಿಕೊಳ್ಳಲಾಗಿದೆ.
ಡಿಸಿಐಬಿ ಘಟಕದ ಎಎಸ್‌ಐ ರವಿಚಂದ್ರ, ಸಿಬ್ಬಂದಿ ರಾಮು ಹೆಗ್ಡೆ, ಚಂದ್ರ ಶೆಟ್ಟಿ, ಸುರೇಶ, ಸಂತೋಷ ಕುಂದರ್, ರಾಘವೇಂದ್ರ ಉಪ್ಪುಂದ, ರಾಜ್‌ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಕಾರ್ಯಾಚರಣೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.