ADVERTISEMENT

ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2025, 7:13 IST
Last Updated 28 ನವೆಂಬರ್ 2025, 7:13 IST
<div class="paragraphs"><p>ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮ</p></div>

ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮ

   

ಉಡುಪಿ: ಉಡುಪಿಯ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದಾರೆ.

ಕೃಷ್ಣಮಠಕ್ಕೆ ಭೇಟಿ ನೀಡಿದ ನಂತರ ಅವರು ಸಭಾಂಗಣಕ್ಕೆ ಆಗಮಿಸಿದರು. ಲಕ್ಷ ಕಂಠ ಗೀತಾ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಅವರು ಪಠಿಸಲಿದ್ದಾರೆ.

ADVERTISEMENT

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌, ಸಚಿವ ಬೈರತಿ ಸುರೇಶ್, ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಇತರರು ವೇದಿಕೆಯಲ್ಲಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.