ADVERTISEMENT

ಉಡುಪಿ: ಗೀತೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಲಕ್ಷಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2025, 6:19 IST
Last Updated 6 ನವೆಂಬರ್ 2025, 6:19 IST
ಬೃಹತ್ ಗೀತೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು
ಬೃಹತ್ ಗೀತೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು   

ಉಡುಪಿ: ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರ ವಿಶ್ವ ಗೀತಾ ಪರ್ಯಾಯದ ಬೃಹತ್ ಗೀತೋತ್ಸವ ಕಾರ್ಯಕ್ರಮ ನ. 8ರಿಂದ ಒಂದು ತಿಂಗಳ ಕಾಲ ನಡೆಯಲಿದ್ದು, ಅದರ ಪೂರ್ವಭಾವಿ ಸಭೆ ಬುಧವಾರ ಕೃಷ್ಣ ಮಠದ ಕನಕ ಮಂಟಪದಲ್ಲಿ ನಡೆಯಿತು.

ಸುಗುಣೇಂದ್ರತೀರ್ಥ ಶ್ರೀಪಾದರು ಮಾತನಾಡಿ, ಗೀತಾಚಾರ್ಯ ಶ್ರೀಕೃಷ್ಣನ ಉಡುಪಿಯಲ್ಲಿ ಭಗವದ್ಗೀತೆಯ ಸಂದೇಶವನ್ನು ಸಾಕಷ್ಟು ವಿಸ್ತೃತವಾಗಿ ನಾವು ಮಾಡುತ್ತಿದ್ದು ಲಕ್ಷಾಂತರ ಮಂದಿ ಈಗಾಗಲೇ ಕೋಟಿ ಗೀತಾ ಲೇಖನಯಜ್ಞದಲ್ಲಿ ಭಾಗವಹಿಸಿದ್ದು ಅತೀವ ಸಂತಸ ತಂದಿದೆ ಎಂದರು.

ಲಕ್ಷಕಂಠ ಗೀತಾ ಪಾರಾಯಣ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುತ್ತಿದ್ದಾರೆ. ಅಲ್ಲದೆ ಅನೇಕ ಸಂತರು ಈ ಉತ್ಸವದಲ್ಲಿ ಪಾಲ್ಗೊಂಡು ಗೀತಾ ಸಂದೇಶ ನೀಡಲಿದ್ದಾರೆ ಎಂದು ಹೇಳಿದರು.

ADVERTISEMENT

ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀಪಾದರು ಬಿಡುಗಡೆಗೊಳಿಸಿದರು. ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶಪಾಲ್ ಸುವರ್ಣ, ಗುರ್ಮೆ ಸುರೇಶ ಶೆಟ್ಟಿ, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಕಿದಿಯೂರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಸಹಕಾರ್ಯವಾಹ ವಾದಿರಾಜ, ಮಾಜಿ ಶಾಸಕ ಲಾಲಾಜಿ ಮೆಂಡನ್, ಕಾರ್ಯಕ್ರಮ ಸಂಚಾಲಕ ಬೈಕಾಡಿ ಸುಪ್ರಸಾದ ಶೆಟ್ಟಿ ಇದ್ದರು.

ಪುತ್ತಿಗೆ ಮಠ ದಿವಾನ ನಾಗರಾಜ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಸನ್ನಾಚಾರ್ಯ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.