
ಉಡುಪಿ: ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರ ಜಾಗತಿಕ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞ ಮತ್ತು ಗೀತಾ ಜಯಂತಿ ಅಂಗವಾಗಿ ಕೃಷ್ಣಮಠದಲ್ಲಿ ಬೃಹತ್ ಗೀತೋತ್ಸವ ಒಂದು ತಿಂಗಳ ಕಾಲ ನಡೆಯಲಿದ್ದು, ಅದರ ಕಾರ್ಯಾಲಯ ಶನಿವಾರ ಉದ್ಘಾಟನೆಗೊಂಡಿತು.
ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಾಲಯವನ್ನು ಉದ್ಘಾಟಿಸಿದರು. ಬಳಿಕ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವ ಗೀತಾ ಪರ್ಯಾಯದಲ್ಲಿ ಭಗವದ್ಗೀತೆಯ ತತ್ವವನ್ನೇ ಜೀವನದಲ್ಲಿ ಅಳವಡಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ. 28ರಂದು ಶ್ರೀಕೃಷ್ಣನ ದರ್ಶನಕ್ಕೆ ಬರುತ್ತಿರುವುದು ಸಂತಸ ತಂದಿದೆ ಎಂದರು.
ಸುಪ್ರಸಾದ ಶೆಟ್ಟಿ ಸಂಚಾಲಕತ್ವದಲ್ಲಿ ಕಾರ್ಯಕ್ರಮವನ್ನು ಸಂಘಟಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ದಿವಾನ ನಾಗರಾಜಾಚಾರ್ಯ, ಅಂತರರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ, ಪ್ರಮೋದ್ ಸಾಗರ್ ರವರೂತ್ ಮಾತನಾಡಿದರು.
ರಮೇಶ ಭಟ್ ಸ್ವಾಗತಿಸಿದರು. ವಿಕ್ರಂ ಕುಂಟಾರ ವಂದಿಸಿದರು. ವಿವಿಧ ಸಂಸ್ಥೆಗಳ ಪ್ರಮುಖರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.