ADVERTISEMENT

ಭೂಕುಸಿತ ತಡೆಗೆ ಜಿಯೊ ಮ್ಯಾಪಿಂಗ್‌: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 9:35 IST
Last Updated 11 ಆಗಸ್ಟ್ 2020, 9:35 IST
ಬಸವರಾಜ್‌ ಬೊಮ್ಮಾಯಿ
ಬಸವರಾಜ್‌ ಬೊಮ್ಮಾಯಿ   

ಉಡುಪಿ: ಕರಾವಳಿಯಲ್ಲಿ ಕಡಲ್ಕೊರೆತ ತಡೆಗೆ ಹಾಗೂ ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶಗಳಲ್ಲಿ ಭೂಕುಸಿತ ತಡೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಚರ್ಚಿಸಲಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪಡುಬಿದ್ರಿಯ ಕಡಲ್ಕೊರೆತ ಪ್ರದೇಶಗಳಿಗೆ ಮಂಗಳವಾರ ಭೇಟಿನೀಡಿ ಮಾತನಾಡಿದ ಅವರು, ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ ಕಾರ್ಯಕ್ರಮಗಳನ್ನು ರೂಪಿಸಲು ಹೆಚ್ಚಿನ ಅನುದಾನ ಕೋರಿ ಪ್ರಧಾನಿಗೆ ಮನವಿ ಮಾಡಲಾಗಿದೆ. ಪಶ್ಚಿಮಘಟ್ಟದಲ್ಲಿ ಭೂಕುಸಿತ ಸಂಭವಿಸುವ ಸೂಕ್ಷ್ಮ ಪ್ರದೇಶಗಳಲ್ಲಿ ಜಿಯಾಲಜಿಕಲ್‌ ಸರ್ವೆ ಆಫ್‌ ಇಂಡಿಯಾ ಮೂಲಕ ಜಿಯೊ ಮ್ಯಾಪಿಂಗ್ ಮಾಡಿಸಿ, ಶಾಶ್ವತವಾಗಿ ಭೂಕುಸಿತ ತಡೆಯುವ ಬಗ್ಗೆ ಚರ್ಚಿಸಲಾಗಿದೆ. ಶೀಘ್ರ ಭೂಕುಸಿತ ಸ್ಥಳಗಳಲ್ಲಿ ವಾಸವಾಗಿರುವವರನ್ನು ಸ್ಥಳಾಂತರ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಈ ಬಾರಿ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶ ಇಲ್ಲ. ಪರೇಡ್ ಕೂಡ ಇರುವುದಿಲ್ಲ. ಕೋವಿಡ್‌ ಮಾರ್ಗಸೂಚಿಯನ್ವಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಚಿವರು ತಿಳಿಸಿದರು.

ADVERTISEMENT

ಜಿಲ್ಲೆಯಲ್ಲಿ ಪ್ರವಾಹ ತುರ್ತು ಪರಿಹಾರ ಕಾಮಗಾರಿಗಳಿಗೆ ಎನ್‌ಡಿಆರ್‌ಎಫ್‌ನಿಂದ ₹ 10 ಕೋಟಿ ಬಿಡುಗಡೆ ಮಾಡಲಾಗುವುದು. ಸದ್ಯ ಜಿಲ್ಲಾಧಿಕಾರಿ ಖಾತೆಯಲ್ಲಿ ₹ 3 ಕೋಟಿ ಇದ್ದು, ಬಳಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.