ADVERTISEMENT

ನೈತಿಕ ಮೌಲ್ಯ; ಜೀವನಕ್ಕೆ ಭದ್ರ ಬುನಾದಿ: ಎನ್.ವಿನಯ್ ಹೆಗ್ಡೆ

ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ವಿದ್ಯಾರ್ಥಿನಿ ನಿಲಯದ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2022, 2:48 IST
Last Updated 27 ನವೆಂಬರ್ 2022, 2:48 IST
ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ವತಿಯಿಂದ ಕಟಪಾಡಿಯ ಎಸ್.ವಿ.ಎಸ್. ವಿದ್ಯಾಸಂಸ್ಥೆಗಳ ಆವರಣದಲ್ಲಿ ನಿರ್ಮಿಸಲಾದ ನೂತನ ಮಹಡಿ ಮತ್ತು ವಿದ್ಯಾರ್ಥಿನಿ ನಿಲಯವನ್ನು ಗೋಕರ್ಣ ಪರ್ತಗಾಳಿ ಜೀವೊತ್ತಮ ಮಠದ ವಿದ್ಯಾಧೀಶತೀರ್ಥ ಸ್ವಾಮೀಜಿ ಉದ್ಘಾಟಿಸಿದರು
ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ವತಿಯಿಂದ ಕಟಪಾಡಿಯ ಎಸ್.ವಿ.ಎಸ್. ವಿದ್ಯಾಸಂಸ್ಥೆಗಳ ಆವರಣದಲ್ಲಿ ನಿರ್ಮಿಸಲಾದ ನೂತನ ಮಹಡಿ ಮತ್ತು ವಿದ್ಯಾರ್ಥಿನಿ ನಿಲಯವನ್ನು ಗೋಕರ್ಣ ಪರ್ತಗಾಳಿ ಜೀವೊತ್ತಮ ಮಠದ ವಿದ್ಯಾಧೀಶತೀರ್ಥ ಸ್ವಾಮೀಜಿ ಉದ್ಘಾಟಿಸಿದರು   

ಶಿರ್ವ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಆಧುನಿಕ ಶಿಕ್ಷಣ ಪದ್ಧತಿ ಅಳವಡಿಸಿಕೊಂಡಿರುವ ತ್ರಿಶಾ ವಿದ್ಯಾಸಂಸ್ಥೆಯು ವಿಶ್ವವಿದ್ಯಾಲಯವಾಗಿ ಪರಿಗಣಿಸಬಲ್ಲ ಎಲ್ಲಾ ಅರ್ಹತೆಗಳನ್ನು ಹೊಂದಿದೆ ಎಂದು ನಿಟ್ಟೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ವಿನಯ್ ಹೆಗ್ಡೆ ಹೇಳಿದರು.

ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ವತಿಯಿಂದ ಕಟಪಾಡಿಯ ಎಸ್.ವಿ.ಎಸ್. ವಿದ್ಯಾಸಂಸ್ಥೆಗಳ ಆವರಣದಲ್ಲಿ ವಿದ್ಯಾರ್ಥಿಗಳ ಅನುಕೂಲತೆಗಾಗಿ ನಿರ್ಮಿಸಲಾದ ಕಾಲೇಜಿನ ವಿಸ್ತೃತ ನೂತನ ಮಹಡಿ ಮತ್ತು ‘ಸಂಸ್ಕೃತಿ’ ವಿದ್ಯಾರ್ಥಿನಿ ನಿಲಯದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಗೋವಾದ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಉದ್ಘಾಟನೆ ನೆರವೇರಿಸಿದರು. ಮನುಷ್ಯ ಎಷ್ಟೇ
ದೊಡ್ಡ ಪದವಿ ಪಡೆದುಕೊಂಡಿದ್ದರೂ, ಜೀವನದಲ್ಲಿ ಉತ್ತಮ ನೈತಿಕ ಮೌಲ್ಯಗಳನ್ನು ಹೊಂದದಿದ್ದಲ್ಲಿ ಆ ಪದವಿಗಳಿಗೆ ಮೌಲ್ಯಗಳಿಲ್ಲ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದೊಂದಿಗೆ ಮೂಲ ಸೌಕರ್ಯಗಳನ್ನೂ ಒದಗಿಸಬೇಕಾಗಿರುವುದು ಇಂದಿನ ಅಗತ್ಯ ಎಂದರು.

ADVERTISEMENT

ಕಟಪಾಡಿ ಎಸ್.ವಿ.ಎಸ್ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ. ಸತ್ಯೇಂದ್ರ ಪೈ ಮಾತನಾಡಿದರು. ಕಟಪಾಡಿ ತ್ರಿಶಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸಿ.ಎ. ಗೋಪಾಲಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ರಾಮಚಂದ್ರ ಭಟ್ ಸ್ವಾಗತಿಸಿದರು. ಪ್ರಾಂಶುಪಾಲ ಪ್ರೊ. ಗುರುಪ್ರಸಾದ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಧೀರಜ್ ಬೆಳ್ಳಾರೆ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.