ADVERTISEMENT

ಕಾರ್ಕಳ ಭುವನೇಂದ್ರ ಕಾಲೇಜಿಗೆ ಉತ್ತಮ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2025, 14:10 IST
Last Updated 10 ಏಪ್ರಿಲ್ 2025, 14:10 IST
ಅನ್ನಪೂರ್ಣ ಕಾಮತ್
ಅನ್ನಪೂರ್ಣ ಕಾಮತ್   

ಕಾರ್ಕಳ: ಇಲ್ಲಿನ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯು ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿನಿ ಅನ್ನಪೂರ್ಣಾ ಕಾಮತ್ ‌ವಾಣಿಜ್ಯ ವಿಭಾಗದಲ್ಲಿ 593 ಅಂಕ,  ವಿಜ್ಞಾನ ವಿಭಾಗದಲ್ಲಿ ಕೀರ್ತನಾ 590 ಅಂಕ, ಪಡೆದಿದ್ದಾರೆ.  ಕಾಲೇಜಿನ 9 ವಿದ್ಯಾರ್ಥಿಗಳು 580ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ.

ವಿಜ್ಞಾನ ವಿಭಾಗದ ಎಂ. ಕಾರ್ತಿಕ ಕುಡ್ವ  588, ಪ್ರತೀಕ್ಷಾ ಪ್ರಭು 587, ಅಮೂಲ್ಯಾ ಎ.ಎಂ 581, ಸಿದ್ದಾರ್ಥ ಕಾಮತ್ ಕೆ.ಜಿ 580, ವಾಣಿಜ್ಯ ವಿಭಾಗದ ಸೃಷ್ಟಿ ಬಿ.ಜಿ 586, ಶ್ರೇಯಾ 585, ಶ್ರೀವಿದ್ಯಾ ಆರ್.ಜೆ 580 ಅಂಕ ಪಡೆದಿದ್ದಾರೆ. ಕಲಾ ವಿಭಾಗದ ಸ್ಪಂದನಾ ಕೆ.ಎಸ್ 570 ಅಂಕ ಗಳಿಸಿದ್ದಾರೆ.

ಪರೀಕ್ಷೆಗೆ ಹಾಜರಾದ 262 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 159 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 95 ವಿದ್ಯಾರ್ಥಿಗಳಲ್ಲಿ 95 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು,  ಶೇ 100ರಷ್ಟು ಫಲಿತಾಂಶ ಬಂದಿದೆ.

ADVERTISEMENT

ತಾಲ್ಲೂಕಿನ ಬೈಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 160 ವಿದ್ಯಾರ್ಥಿಗಳಲ್ಲಿ 155 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ 96.8 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ  ಸುಧೀಕ್ಷಾ 577 ಅಂಕ ಪಡೆದಿದ್ದಾರೆ. ಒಟ್ಟು 27 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 106 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕೀರ್ತನಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.