ADVERTISEMENT

ವಿದ್ಯುತ್ ದರ ಏರಿಕೆ ನಿಯಾಮವಳಿ ಹಿಂಪಡೆಯುವ ಚಿಂತನೆ: ಸುನಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2022, 15:34 IST
Last Updated 2 ಅಕ್ಟೋಬರ್ 2022, 15:34 IST
   

ಉಡುಪಿ: ಅಗತ್ಯಬಿದ್ದರೆ ವಿದ್ಯುತ್ ದರ ಏರಿಕೆ ನಿಯಾಮವಳಿಯನ್ನು ಹಿಂಪಡೆಯಲಾಗುವುದು ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.

ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ವಿದ್ಯುತ್ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ. 2014ರಲ್ಲಿ ಕಲ್ಲಿದ್ದಲಿನ ಬೆಲೆ ಹೊಂದಾಣಿಕೆಗೆ ರೂಪಿಸಲಾಗಿದ್ದ ನಿಯಮಾವಳಿಯೇ ಮುಂದುವರಿದಿದೆ. ವಿದ್ಯುತ್ ದರ ಏರಿಕೆಯಿಂದ ಜನರಿಗೆ ಹೊರೆಯಾಗುತ್ತಿರುವ ವಿಚಾರ ಅರಿವಿದ್ದು, ನಿಯಮಾವಳಿಯ ಸಾಧಕ ಬಾಧಕಗಳ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದರೆ ಗಾಂಧಿ ಕುಟುಂಬದ ಕೈಗೊಂಬೆಯಾಗಲಿದ್ದು ಸ್ವತಂತ್ರವಾಗಿ ಕೆಲಸ ಮಾಡಲು ಸಾದ್ಯವಾಗುವುದಿಲ್ಲ. ಯುವಕರ ಪಕ್ಷ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಖರ್ಗೆಯವರಂತಹ ಹಿರಿಯರನ್ನು ಅಧ್ಯಕ್ಷರನ್ನಾಗಿ ಮಾಡುತ್ತಿದೆ. ಮುಂದೆ ಕರ್ನಾಟಕದಲ್ಲಿ ಸಿದ್ದರಾಮಯ್ಯ, ಡಿಕೆಶಿ ಜತೆಗೆ ಖರ್ಗೆಯವರ ಗುಂಪು ಉದಯವಾಗಲಿದೆ ಎಂದು ವ್ಯಂಗ್ಯವಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.