ADVERTISEMENT

ಸೇವಾ ಭದ್ರತೆ ಕೊಡಿ: ಅತಿಥಿ ಉಪನ್ಯಾಸಕರು

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 16:47 IST
Last Updated 22 ಡಿಸೆಂಬರ್ 2021, 16:47 IST
ಸೇವೆ ಖಾಯಂ, ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಹಿತರಕ್ಷಣಾ ಸಮಿತಿಯ ಜಿಲ್ಲಾ ಘಟಕ ಹಾಗೂ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಧರಣಿ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಉಡುಪಿ: ಸೇವೆ ಖಾಯಂ, ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಹಿತರಕ್ಷಣಾ ಸಮಿತಿಯ ಜಿಲ್ಲಾ ಘಟಕ ಹಾಗೂ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಜಾಥಾ ಹಾಗೂ ಧರಣಿ ನಡೆಸಿತು.

ಈ ವೇಳೆ ಮಾತನಾಡಿದ ಅತಿಥಿ ಉಪನ್ಯಾಸಕರು 15 ರಿಂದ 20 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸರ್ಕಾರ ಖಾಯಂ ನೌಕರರನ್ನಾಗಿಸಬೇಕು ಎಂದು ಹಲವು ಬಾರಿ ಮನವಿ ಮಾಡಿದರೂ ಸ್ಪಂದನ ಸಿಕ್ಕಿಲ್ಲ. ಹೋರಾಟಗಳನ್ನು ನಡೆಸಿದರೂ ನಿರ್ಲಕ್ಷ್ಯ ತೋರಲಾಗುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದವರೆಗೆ ಪ್ರತಿಭಟನಾ ಜಾಥಾ ನಡೆಸಿದ ಅತಿಥಿ ಉಪನ್ಯಾಸಕರು ಕಚೇರಿಯ ಮುಂದೆ ಧರಣಿ ನಡೆಸಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.