ADVERTISEMENT

ಕುಂದಾಪುರ | ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 25 ಮೇ 2025, 14:16 IST
Last Updated 25 ಮೇ 2025, 14:16 IST
ಗುಲ್ವಾಡಿ ಗ್ರಾಮ ಪಂಚಾಯಿತಿ ಕೌಂಜೂರು ಕೆತ್ತಮಕ್ಕಿ ಎಸ್‌ಸಿ ಕಾಲೊನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗುರುರಾಜ್ ಗಂಟಿಹೊಳೆ ಚಾಲನೆ ನೀಡಿದರು
ಗುಲ್ವಾಡಿ ಗ್ರಾಮ ಪಂಚಾಯಿತಿ ಕೌಂಜೂರು ಕೆತ್ತಮಕ್ಕಿ ಎಸ್‌ಸಿ ಕಾಲೊನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗುರುರಾಜ್ ಗಂಟಿಹೊಳೆ ಚಾಲನೆ ನೀಡಿದರು   

ಕುಂದಾಪುರ: ಭಗವಂತ ನೀಡಿರುವ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಿ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ತಾಲ್ಲೂಕಿನ ಗುಲ್ವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೌಂಜೂರು ಕೆತ್ತಮಕ್ಕಿ ಎಸ್‌ಸಿ ಕಾಲೊನಿಗೆ ಹೋಗುವ ರಸ್ತೆ ಅಭಿವೃದ್ಧಿಯ ₹50 ಲಕ್ಷ ವೆಚ್ಚದ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆ ನೇರವೇರಿಸಿ ಅವರು ಮಾತನಾಡಿದರು.

ಬಡವರು, ಮಹಿಳೆಯರು, ಶೋಷಿತರು, ಯುವ ಸಮುದಾಯ ಸೇರಿದಂತೆ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸದಾ ಸಿದ್ಧ. ಸಮಸ್ಯೆ, ದೂರುಗಳಿದ್ದಲ್ಲಿ ನಮ್ಮ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ನೀಡಿದರೆ ಪರಿಹಾರ ಕ್ರಮಗಳಿಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.