ಉಡುಪಿ: ಇಲ್ಲಿನ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ನೀಡುವ ಟಿ.ವಿಮಲಾ ವಿ. ಪೈ ಪ್ರಾಯೋಜಿತ 2024ನೇ ಸಾಲಿನ ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿಗೆ ಲೇಖಕ ಹಂ.ಪ. ನಾಗರಾಜಯ್ಯ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹ 1 ಲಕ್ಷ ನಗದು ಒಳಗೊಂಡಿದೆ. ಮಾರ್ಚ್ 23 ರಂದು ನಡೆಯಲಿರುವ ಗೋವಿಂದ ಪೈ ಸಂಶೋಧನ ಸಂಪುಟದ ದ್ವಿತೀಯ ಭಾಗದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಈ ಪ್ರಶಸ್ತಿಯನ್ನು ಟಿ.ವಿ. ಮೋಹನ್‍ದಾಸ್ ಪೈ ಅವರು ಸ್ಥಾಪಿಸಿದ್ದು, ತಾಳ್ತಜೆ ವಸಂತ ಕುಮಾರ್, ಕೆ. ಚಿನ್ನಪ್ಪ ಗೌಡ, ಪ್ರಭಾಕರ ಜೋಶಿ, ಕಿಶೋರಿ ನಾಯಕ್, ಎಸ್.ವಿ. ಪಾಡಿಗಾರ್ ಅವರು ಆಯ್ಕೆ ಸಮಿತಿಯಲ್ಲಿದ್ದರು ಎಂದು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಬಿ. ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.