ಉಡುಪಿ: ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆ ಪೂರ್ಣಗೊಳ್ಳುವ ಮೊದಲೇ ಆರೋಪಿ ಶರಣ್ ಅವರು ಸಾರ್ವಜನಿಕ ಶಾಂತಿ, ಸುವ್ಯವಸ್ಥೆಗೆ ಭಂಗ ತರುವಂತೆ ಸುದ್ದಿಗೋಷ್ಠಿಯಲ್ಲಿ ಸುಳ್ಳು ಮಾಹಿತಿ ನೀಡಿ, ಸಾರ್ವಜನಿಕರಲ್ಲಿ ಗೊಂದಲ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಶರಣ್ ಪಂಪ್‌ವೆಲ್ ಅವರ ಹೇಳಿಕೆಯ ವಿಡಿಯೊ ವಿವಿಧ ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಹರಿದಾಡಿದೆ ಎಂದೂ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.