ADVERTISEMENT

ಶಿಕ್ಷಣ, ಆರೋಗ್ಯ ಸಚಿವ ಶ್ರೀರಾಮುಲು ಪ್ರವಾಸ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 15:48 IST
Last Updated 8 ಜೂನ್ 2020, 15:48 IST
ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರವಾಸ
ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರವಾಸ   

ಉಡುಪಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ‌ಕುಮಾರ್ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಜೂನ್ 9ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಶಿಕ್ಷಣ ಸಚಿವರು ಬೆಳಿಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಿಇಒಗಳ ಹಾಗೂ ಡಿಡಿಪಿಐ ಬಿಇಒಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತೆ ಕುರಿತು ಪರೀಶೀಲನಾ ಸಭೆ ನಡೆಸಲಿದ್ದಾರೆ.

ಆರೋಗ್ಯ ಸಚಿವ ಶ್ರೀರಾಮುಲು ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಬಳಿಕ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ಕೊಡಗು ಜಿಲ್ಲೆಗೆ ತೆರಳಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.