ಉಡುಪಿ: ಜಿಲ್ಲೆಯಾದ್ಯಂತ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಿಗ್ಗೆ ಧಾರಾಕಾರ ಮಳೆ ಸುರಿದಿದೆ.
ಭಾರಿ ಗಾಳಿ, ಮಳೆಯ ಕಾರಣ ಕುಂದಾಪುರ, ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲ್ಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇದೇ 25ರಂದು (ಗುರುವಾರ) ರಜೆ ಘೋಷಿಸಲಾಗಿದೆ.
ಉಡುಪಿ ನಗರ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದಾಗಿ ಬೆಳಿಗ್ಗೆ ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ, ಕೆಲಸಕ್ಕೆ ತೆರಳುವವರಿಗೆ ತೊಂದರೆಯಾಯಿತು.
ನಗರದ ಕೆಲವೆಡೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹಗೊಂಡು ವಾಹನ ಸವಾರರು ಪರದಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.