ADVERTISEMENT

ಉಡುಪಿ ಜಿಲ್ಲೆಯಾದ್ಯಂತ ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 4:48 IST
Last Updated 6 ಜುಲೈ 2025, 4:48 IST
<div class="paragraphs"><p>ಉಡುಪಿ ನಗರದಲ್ಲಿ ಶನಿವಾರ ಬಿರುಸಿನ ಮಳೆ ಸುರಿಯಿತು</p></div>

ಉಡುಪಿ ನಗರದಲ್ಲಿ ಶನಿವಾರ ಬಿರುಸಿನ ಮಳೆ ಸುರಿಯಿತು

   

ಉಡುಪಿ: ಜಿಲ್ಲೆಯಾದ್ಯಂತ ಶನಿವಾರ ಬಿರುಸಿನ ಮಳೆ ಸುರಿದಿದ್ದು, ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ನಗರ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ಸಂಗ್ರಹವಾಗಿ ವಾಹನ ಸವಾರರು ಸಂಕಷ್ಟ ಅನುಭವಿಸಿದರು.

ADVERTISEMENT

ಕುಂದಾಪುರ, ಹೆಬ್ರಿ, ಬೈಂದೂರು, ಕಾಪು, ಕಾರ್ಕಳ, ಬ್ರಹ್ಮಾವರ ವ್ಯಾಪ್ತಿಯಲ್ಲಿ ಬಿರುಸಿನ ಮಳೆ ಸುರಿದಿದೆ.

ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಾರ್ಕಳದಲ್ಲಿ 6 ಸೆಂ.ಮೀ., ಕುಂದಾಪುರದಲ್ಲಿ 9 ಸೆಂ.ಮೀ., ಉಡುಪಿಯಲ್ಲಿ 7 ಸೆಂ.ಮಿ., ಹೆಬ್ರಿಯಲ್ಲಿ 8 ಸೆಂ.ಮೀ. ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.