ಉಡುಪಿ : ಜಿಲ್ಲೆಯಾದ್ಯಂತ ಸೋಮವಾರ ಭಾರಿ ಮಳೆ ಸುರಿಯುತ್ತಿದ್ದು, ಕೆಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.
ಹವಾಮಾನ ಇಲಾಖೆಯು ಬಾರಿ ಮಳೆ ಸುರಿಯುವ ಮುನ್ಸೂಚನೆ ನೀಡಿದ ಕಾರಣ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ನಗರ ವ್ಯಾಪ್ತಿ ಹಾಗೂ ವಿವಿಧೆಡೆ ಬಿರುಸಿನ ಮಳೆಗೆ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ತೊಂದರೆ ಅನುಭವಿಸಿದರು.
ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಬ್ರಹ್ಮಾವರ, ಕಾಪು ವ್ಯಾಪ್ತಿಯಲ್ಲೂ ಧಾರಾಕಾರ ಮಳೆ ಸುರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.