
ಪ್ರಜಾವಾಣಿ ವಾರ್ತೆ
ಹೆಬ್ರಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾದ ಜಾನುವಾರು ಕಳವು, ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರಿನ ಮೂಡುತೆರಾರು ಗ್ರಾಮದ ಗಂಜಿಮಠ ಬಸ್ ನಿಲ್ದಾಣದ ಬಳಿ ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಕೆಮ್ಮಣ್ಣು ಹೂಡೆ ನಿವಾಸಿಗಳಾದ ವಸಿಂ ಅಕ್ರಂ (32), ಸೈಫನ್ ಮುಕ್ತಸರ ಬಂಧಿತರು. ಅವರಿಬ್ಬರ ಮೇಲೆ ಬಿಎನ್‌ಎಸ್, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ, ಪ್ರಾಣಿಹಿಂಸಾ ಪ್ರತಿಬಂಧಕ ಕಾಯ್ದೆ ಪ್ರಕಾರ ಕೇಸು ದಾಖಲಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.