ಪೊಲೀಸ್ (ಪ್ರಾತಿನಿಧಿಕ ಚಿತ್ರ)
ಹೆಬ್ರಿ: ವರಂಗ ಗ್ರಾಮದ ಮುನಿಯಾಲು ಬೈಲು ಎಂಬಲ್ಲಿ ಸರ್ಕಾರಿ ಹಾಡಿಯಲ್ಲಿ ಕೆಲವರು ಹಣ ಪಣವಾಗಿಟ್ಟು ಜೂಜು ಆಡುತ್ತಿದ್ದ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಾದ ಉದಯ ನಾಯ್ಕ, ಶಿವರಾಮ ಶೆಟ್ಟಿ, ಕಿರಣ ನಾಯ್ಕ, ಆನಂದ, ಅಶೋಕ, ಸುರೇಶ ನಾಯ್ಕ ಅವರನ್ನು ವಶಕ್ಕೆ ಪಡೆದು ಅವರಿಂದ ಆಟಕ್ಕೆ ಉಪಯೋಗಿಸಿದ ₹3,390 ನಗದು, ಇಸ್ಪೀಟ್ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.