ADVERTISEMENT

ಹೆಬ್ರಿ: ಗಣೇಶೋತ್ಸವ ಸುವರ್ಣ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 6:35 IST
Last Updated 30 ಆಗಸ್ಟ್ 2025, 6:35 IST
ಹೆಬ್ರಿ ಗಣೇಶೋತ್ಸವದ 2ನೇ ದಿನದ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು
ಹೆಬ್ರಿ ಗಣೇಶೋತ್ಸವದ 2ನೇ ದಿನದ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು   

ಹೆಬ್ರಿ: ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 5 ದಿನಗಳ ಕಾಲ ನಡೆಯುವ ಗಣೇಶೋತ್ಸವ ಸುವರ್ಣ ಸಂಭ್ರಮದ 2ನೇ ದಿನದ ಸಭಾ ಕಾರ್ಯಕ್ರಮ ಪ್ರಸನ್ನ ಬಲ್ಲಾಳ್‌ ವೇದಿಕೆಯಲ್ಲಿ ಗುರುವಾರ ನಡೆಯಿತು.

ಸಾಧಕರು, ದಾನಿಗಳನ್ನು ಗೌರವಿಸಲಾಯಿತು. ನಗೆ ಹಬ್ಬ, ಮಿಮಿಕ್ರಿ, ನೃತ್ಯಾರ್ಪಣಂ, ಯಕ್ಷಗಾನ ಪ್ರದರ್ಶನ ನಡೆಯಿತು. ನಿರಂತರವಾಗಿ ಮಳೆ ಸುರಿಯುತ್ತಿದ್ದರೂ ಜನ ಕಿಕ್ಕಿರಿದು ಸೇರಿದ್ದರು.

ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಎಚ್. ಗುಂಡೂ ನಾಯಕ್‌ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಎಚ್.‌ ಬಾಲಕೃಷ್ಣ ನಾಯಕ್‌, ಮುದ್ರಾಡಿ ಗುರುರಕ್ಷಾ ಚಾರಿಟಬಲ್‌ ಟ್ರಸ್ಟ್‌ ಅಧ್ಯಕ್ಷ ಮಂಜುನಾಥ ಪೂಜಾರಿ, ಉದ್ಯಮಿ ಎಚ್.‌ ರಾಜೇಶ ನಾಯಕ್‌, ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನವೀನ್‌ ಕೆ. ಅಡ್ಯಂತಾಯ, ರೋಟರಿ ಗ್ರಾಮೀಣ ದಳದ ಸ್ಥಾಪಕಾಧ್ಯಕ್ಷ ಎಚ್.‌ ರಾಮಕೃಷ್ಣ ಆಚಾರ್ಯ, ಸರ್ಕಾರಿ ಪಿಯು ಕಾಲೇಜು ಉಪ ಪ್ರಾಂಶುಪಾಲ ದಿವಾಕರ ಮರಕಾಲ, ಬೆಂಗಳೂರು ಉದ್ಯಮಿ ಚಾರ ವಾಸುದೇವ ಹೆಬ್ಬಾರ್‌, ಸಿಟಿ ಲಯನ್ಸ್‌ ಕ್ಲಬ್‌ ಅಧ್ಯಕ್ಷೆ ಆಶಾ ಬಿ. ಶೆಟ್ಟಿ, ಅನಂತ ಪದ್ಮನಾಭ ರಿಕ್ಷಾ ಚಾಲಕ ಮಾಲೀಕರ ಸಂಘದ ಅಧ್ಯಕ್ಷ ಪ್ರಭಾಕರ ಪೂಜಾರಿ, ಕೆನರಾ ಬ್ಯಾಂಕ್‌ ಸಹಾಯಕ ಪ್ರಬಂಧಕ ಶಂಕರ ನಾಯ್ಕ್‌, ಗಣೇಶೋತ್ಸವ ಸಮಿತಿ ಅಧ್ಯಕ್ಷ ಎಚ್. ಜನಾರ್ದನ್‌, ಪ್ರಧಾನ ಕಾರ್ಯದರ್ಶಿ ಎಚ್.‌ ರಾಜೇಶ ಆಚಾರ್ಯ ಮಠದಬೆಟ್ಟು, ಮಹಿಳಾ ಸಮಿತಿ ಸಂಚಾಲಕಿ ಭಾನು ಪಿ. ಬಲ್ಲಾಳ್‌, ಗಣೇಶೋತ್ಸವ ಸಮಿತಿ, ಮಹಿಳಾ ಸಮಿತಿ, ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.