ಹೆಬ್ರಿ: ವೃತ್ತದ ಮಟ್ಟದ ಕೊಕ್ಕೊ ಟೂರ್ನಿಯಲ್ಲಿ ಕುಚ್ಚೂರು 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕ, ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯಿತು.
ಎಸ್‌ಡಿಎಂಸಿ ಅಧ್ಯಕ್ಷ ವಿಜಯ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಟೂರ್ನಿ ಉದ್ಘಾಟಿಸಿದರು. ಪ್ರಮುಖರಾದ ಬಿ. ಕರುಣಾಕರ ಶೆಟ್ಟಿ, ಕಲಾವತಿ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಸತೀಶ್ ಪೂಜಾರಿ, ಮಾಲಿನಿ, ಶಿಕ್ಷಣ ಇಲಾಖೆಯ ಪ್ರೀತೇಶ್ ಶೆಟ್ಟಿ, ರಾಘವೇಂದ್ರ, ಶಿಕ್ಷಕರ ಸಂಘದ ಅಧ್ಯಕ್ಷ ರಮಾನಂದ ಶೆಟ್ಟಿ, ನಿವೃತ್ತ ಶಿಕ್ಷಕ ಚಂದ್ರಶೇಖರ ಶೆಟ್ಟಿ, ನರಸಿಂಹ ಶೆಟ್ಟಿ ಇದ್ದರು.
ದೈಹಿಕ ಶಿಕ್ಷಣ ಶಿಕ್ಷಕ ಜಯ ಶೆಟ್ಟಿ, ಶಿಕ್ಷಕರಾದ ಆಶಾ ಶೆಟ್ಟಿ, ಪಾರ್ವತಿ, ಆಶಾ ಸಹಕರಿಸಿದರು. ಮುಖ್ಯಶಿಕ್ಷಕಿ ಮಾಲಿನಿ ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ಶೆಟ್ಟಿ ನಿರೂಪಿಸಿದರು. ಅನಿತಾ ಭಟ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.