ADVERTISEMENT

ಜಾಗತಿಕ ಬಂಟರ ಸಂಘದ ನಿರ್ದೇಶಕರಾಗಿ ಪಡುಕುಡೂರು ಹರೀಶ್ ಶೆಟ್ಟಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 14:42 IST
Last Updated 11 ಜೂನ್ 2025, 14:42 IST
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ನಿರ್ದೇಶಕರಾದ ಪಡುಕುಡೂರು ಹರೀಶ್ ಶೆಟ್ಟಿ ಅವರನ್ನು ಗೌರವಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ನಿರ್ದೇಶಕರಾದ ಪಡುಕುಡೂರು ಹರೀಶ್ ಶೆಟ್ಟಿ ಅವರನ್ನು ಗೌರವಿಸಿದರು.   

ಹೆಬ್ರಿ: ಸಮಾಜ ಸೇವಕ, ಮುಂಬೈಯ ಉದ್ಯಮಿ ಪಡುಕುಡೂರು ಪಡುಪರ್ಕಳ ಹರೀಶ ಶೆಟ್ಟಿ ದೊಂಬಿವಿಲಿ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ ನೇಮಕ ಮಾಡಿದ್ದಾರೆ. ‌

ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡುವ, ಮಹತ್ತರ ಯೋಜನೆಯಾದ ಒಕ್ಕೂಟದ ಸಭಾಭವನ ನಿರ್ಮಾಣದ ಸಲುವಾಗಿ ಸಹಕಾರ ನೀಡಲು ಈ ನೇಮಕ ನಡೆಸಲಾಗಿದೆ. ಈ ಮೊದಲು ಹರೀಶ ಶೆಟ್ಟಿ ಅವರು ಪೋಷಕ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT