ADVERTISEMENT

ಹೆಬ್ರಿ: ಯೋಧರ ಒಳಿತಿಗಾಗಿ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 10 ಮೇ 2025, 16:28 IST
Last Updated 10 ಮೇ 2025, 16:28 IST
ಯೋಧರಿಗೆ ಶಕ್ತಿ ತುಂಬಲು ತಾಣ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು
ಯೋಧರಿಗೆ ಶಕ್ತಿ ತುಂಬಲು ತಾಣ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು   

ಹೆಬ್ರಿ: ಪಾಕಿಸ್ತಾನ ವಿರುದ್ಧ ಹೋರಾಡುತ್ತಿರುವ ಭಾರತೀಯ ಸೈನಿಕರ ನೈತಿಕ ಸ್ಥೈರ್ಯ ಬಲಪಡಿಸುವ ನಿಟ್ಟಿನಲ್ಲಿ ಇಲ್ಲಿನ ತಾಣ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಶನಿವಾರ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಕುಚ್ಚೂರು ನೇತೃತ್ವದಲ್ಲಿ ಪ್ರಾರ್ಥನೆ, ಪೂಜೆ ಸಲ್ಲಿಸಲಾಯಿತು.

ಅರ್ಚಕ ಕೆ. ರಮೇಶ್ ಭಟ್ ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ನೀಡಿದರು. ಸುಧಾಕರ ಶೆಟ್ಟಿ ದೇಶಪ್ರೇಮದ ಬಗ್ಗೆ ಮಾತನಾಡಿ ದೇವರಲ್ಲಿ ಪ್ರಾರ್ಥಿಸಿದರು. ಶ್ರೀಕಾಂತ್ ಕುಚ್ಚೂರು ಕೃತಜ್ಞತೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT