
ಹೆಬ್ರಿ: ಇಲ್ಲಿನ ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ 75ನೇ ಗಣರಾಜ್ಯೋತ್ಸವ ದಿನ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ನಾಗರಾಜ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.
ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ, ಆಡಳಿತಾಧಿಕಾರಿ ಹೆರಾಲ್ಡ್ ಲೂಯಿಸ್, ಎಸ್.ಆರ್. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್, ಎಸ್.ಆರ್.ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋಪಾಲ ಆಚಾರ್ಯ, ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ಎಸ್.ಆರ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವರ್ಷಾ ನಿರೂಪಿಸಿ, ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.