
ಪ್ರಜಾವಾಣಿ ವಾರ್ತೆಹೆಬ್ರಿ: ಇಲ್ಲಿನ ಸೀತಾನದಿ ಬೆಳಾರ್ ಪ್ರದೇಶದಲ್ಲಿ ಕಾಡಾನೆ ಮತ್ತೆ ಕಾಣಿಸಿಕೊಂಡಿದೆ.
ಬೆಳಾರಿನ ಮನೆಯೊಂದರ ಗೇಟನ್ನು ಆನೆ ತುಂಡು ಮಾಡಿದೆ. ಜನರು ಆತಂಕಕ್ಕೆ ಒಳಗಾಗಿದ್ದಾರೆ. ಆನೆಗಳಿಂದ ರಕ್ಷಣೆ ಕೋರಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ಹೆಬ್ರಿಯಿಂದ ನೆಲ್ಲಿಕಟ್ಟೆಯವರೆಗೆ ಮಾತ್ರ ಬಸ್ ವ್ಯವಸ್ಥೆ ಇದೆ. ಶಾಲಾ– ಕಾಲೇಜು ವಿದ್ಯಾರ್ಥಿಗಳು, ಜನರು ನಡೆದುಕೊಂಡೇ ಹೋಗಬೇಕಾದ ಪರಿಸ್ಥಿತಿಯಿದೆ. ಈಗ ಭಯದಲ್ಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಬೆಳಾರು ಪ್ರದೇಶದಲ್ಲಿ ಪರಿಶೀಲನೆ ನಡೆಸಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.