ADVERTISEMENT

ಹೆಬ್ರಿ ತಾಲ್ಲೂಕು ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 2:43 IST
Last Updated 17 ಫೆಬ್ರುವರಿ 2026, 2:43 IST
<div class="paragraphs"><p>ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ನೀಡಲಾಯಿತು. </p></div>

ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ನೀಡಲಾಯಿತು.

   

ಹೆಬ್ರಿ: ಶೇಡಿಮನೆ ಅರಸಮ್ಮಕಾನು ದೇವಸ್ಥಾನದಲ್ಲಿ ಮಾ.1ರಂದು ನಡೆಯಲಿರುವ ಹೆಬ್ರಿ ತಾಲ್ಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಇತ್ತೀಚೆಗೆ ನಡೆಯಿತು.

ಶ್ರೀಕ್ಷೇತ್ರ ಅರಸಮ್ಮಕಾನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ ಮೋಹನದಾಸ ಹೆಗ್ಡೆ ಕುದ್ರುಬೀಡು ಅವರ ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀನಿವಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಉದ್ಯಮಿಗಳಾದ ಯೋಗೀಶ್ ಭಟ್ ಹೆಬ್ರಿ, ಸ್ವಾಗತ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಕಾರ್ಯಾಧ್ಯಕ್ಷ ಶಂಕರ ಪೂಜಾರಿ, ಸಂಚಾಲಕ ರಾಧಾಕೃಷ್ಣ ಕ್ರಮಧಾರಿ, ಗೌರವಾಧ್ಯಕ್ಷ ನಾಗರಾಜ ಬಾಯಾರಿ ಪಾಲ್ಗೊಂಡಿದ್ದರು.

ADVERTISEMENT

ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ನವೀನ ಶೆಟ್ಟಿ ಮಡಾಮಕ್ಕಿ ಸ್ವಾಗತಿಸಿದರು. ಶಿಕ್ಷಕ ಶಶಿಧರ ಶೆಟ್ಟಿ ನಿರೂಪಿಸಿದರು. ಕಸಾಪ ಗೌರವ ಕಾರ್ಯದರ್ಶಿ ಮಂಜುನಾಥ್ ಕೆ ಶಿವಪುರ ವಂದಿಸಿದರು. ಪದಾಧಿಕಾರಿ ಪುಷ್ಪಾವತಿ ಹೆಬ್ರಿ ಪ್ರಾರ್ಥಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.