ಹೆಬ್ರಿ: ಹೆಬ್ರಿ ಪರಿಸರದ ಚೆಕ್ ಪೋಸ್ಟ್‌ಗಳಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಆಗುಂಬೆ ಘಾಟಿಯಲ್ಲಿ ಸಂಚಾರ ಸಮಸ್ಯೆ ಉಂಟಾದಾಗ ಹೆಬ್ರಿಯಲ್ಲೇ ವಾಹನಗಳನ್ನು ತಡೆಯಬೇಕು, ಚೆಕ್ ಪೋಸ್ಟ್‌ನಲ್ಲಿ ತಡೆದಾಗ ವಾಹನ ಸವಾರರಿಗೆ ಸಮಸ್ಯೆಗಳು ಆಗುತ್ತದೆ ಎಂದು ಗ್ರಾಮಸ್ಥರು ನಾಡ್ಪಾಲು ಗ್ರಾಮ ಪಂಚಾಯಿತಿಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದರು.
ತಾಲ್ಲೂಕಿನ ನಾಡ್ಪಾಲು ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ಮಾತನಾಡಿದ ಗ್ರಾಮಸ್ಥರು, ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರಕ್ಕೆ ಸಮಸ್ಯೆ ಉಂಟು ಮಾಡುವುದು ಸರಿಯಲ್ಲ ಎಂದರು.
ಚೆಕ್ ಪೋಸ್ಟ್ ಬಳಿ ದೊಡ್ಡ ವಾಹನಗಳನ್ನು ಪರಿಶೀಲನೆಗೆ ನಿಲ್ಲಿಸುವುದರಿಂದ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವುದನ್ನು ಸಭೆಯಲ್ಲಿ ತಿಳಿಸಲಾಯಿತು. ಕಾರ್ಯಚರಿಸುತ್ತಿರುವ ಚೆಕ್ ಪೋಸ್ಟ್‌ಗಳಿಂದ ಆಗುತ್ತಿರುವ ಅನಾಹುತಗಳನ್ನು ಸಭೆಯಲ್ಲಿ ಗ್ರಾಮಸ್ಥರು ವಿವರಿಸಿದರು.
ಅರಣ್ಯ ಮತ್ತು ಕಂದಾಯ ಇಲಾಖೆಯವರು ಜಂಟಿ ಸರ್ವೆ ಮೂಲಕ ತಮ್ಮ ಜಮೀನು ಹದ್ದುಬಸ್ತು ಮಾಡಿಕೊಳ್ಳುವಂತೆ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಆಗ್ರಹಿಸಿದರು.
2026 -27ನೇ ಸಾಲಿನ ಗ್ರಾಮ ಪಂಚಾಯಿತಿಯ ದೂರದೃಷ್ಠಿ ಯೋಜನೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ಹೆಬ್ರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ನಾಡ್ಪಾಲು ಗ್ರಾಮದ ವಿಜಯಾ ಅವರನ್ನು ಗೌರವಿಸಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಸಭೆಯ ಮಾರ್ಗದರ್ಶಕ ಅಧಿಕಾರಿಯಾದ ಕೃಷಿ ಅಧಿಕಾರಿ ರಮೇಶ್, ನಾಡ್ಪಾಲು ಗ್ರಾಮ ಪಂಚಾಯಿತಿ ಸದಸ್ಯರಾದ ದಿನೇಶ ಹೆಗ್ಡೆ, ಆಶಾ, ಸುಮಂಗಲ, ರಾಘವೇಂದ್ರ ಹೆಗ್ಡೆ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದೇವಕಿ ವರದಿ ಮಂಡಿಸಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸದಾಶಿವ ಸೇರ್ವೆಗಾರ್ ನಿರೂಪಿಸಿದರು.
ಸಂಚಾರ ಸಮಸ್ಯೆ ಪರಿಹರಿಸಲು ಜನರ ಆಗ್ರಹ ಚೆಕ್ ಪೋಸ್ಟ್ ಬಳಿ ದೊಡ್ಡ ವಾಹನಗಳ ಪರಿಶೀಲನೆಯಿಂದ ಇತರರಿಗೆ ತೊಂದರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.