ಹೆಬ್ರಿ: ದೇವಾಲಯಗಳು ಧಾರ್ಮಿಕ ಆಚರಣೆಗಳ ಜೊತೆಗೆ ಸಂಸ್ಕೃತಿ, ಸಂಸ್ಕಾರ ತಿಳಿಸುವ ಆಧ್ಯಾತ್ಮಿಕ ಕ್ಷೇತ್ರ. ಕ್ಷೇತ್ರ ದರ್ಶನದಿಂದ ನಮ್ಮಲ್ಲಿ ಸಕಾರಾತ್ಮಕ ಚಿಂತನೆಗಳು ಜಾಗೃತಗೊಳ್ಳುತ್ತವೆ ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.
ಎಳ್ಳಾರೆ ಲಕ್ಷ್ಮಿಜನಾರ್ದನ ದೇವಸ್ಥಾನದ ನೂತನ ಧ್ವಜ ಸ್ತಂಭ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ಕುಕ್ಕಿಕಟ್ಟೆ ರಾಮಕೃಷ್ಣ ತಂತ್ರಿ, ಸಿಎ ಅಶೋಕ ಕುಮಾರ್ ಮುಳ್ಕಾಡು, ಚಂದ್ರಕಲಾ ನಾಯಕ್ ಇದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯೋಗೀಶ ಮಲ್ಯ ಅಧ್ಯಕ್ಷತೆ ವಹಿಸಿದ್ದರು. ದೇವಳದ ಜೀರ್ಣೋದ್ಧಾರ ಕಾರ್ಯಕ್ಕೆ ಕೊಡುಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು. ರಾಮಚಂದ್ರ ನಾಯಕ್ ಸ್ವಾಗತಿಸಿದರು. ಕುಕ್ಕುಜೆ ವಿನಯ ಆರ್ ಭಟ್ ನಿರೂಪಿಸಿ, ವಂದಿಸಿದರು. ಗುರುಪ್ರಸಾದ್ ಕಿಣಿ, ಪ್ರಕಾಶ್ ಸಹಕರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.