ADVERTISEMENT

ವಿಶ್ವಕರ್ಮ ಯುವ ವೃಂದ: ಮಹಾಸಭೆ, ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 18 ಜನವರಿ 2026, 6:38 IST
Last Updated 18 ಜನವರಿ 2026, 6:38 IST

ಹೆಬ್ರಿ: ಇಲ್ಲಿನ ವಿಶ್ವಕರ್ಮ ಯುವ ವೃಂದದ ವತಿಯಿಂದ ವಿಶ್ವಕರ್ಮ ಸಮಾಜ ಸೇವಾ ಸಂಘ, ವಿಶ್ವಕರ್ಮ ಮಹಿಳಾ ಮಂಡಳಿ ಸಹಕಾರದಲ್ಲಿ ನಡೆಯುವ 21ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸಂಘದ ಸಮುದಾಯ ಭವನದಲ್ಲಿ ಜ. 18ರಂದು ನಡೆಯಲಿದೆ.

ವಿಶ್ವಕರ್ಮ ಯುವ ವೃಂದದ ಅಧ್ಯಕ್ಷ ಸಂತೋಷ ಆಚಾರ್ಯ ಅಧ್ಯಕ್ಷತೆ ವಹಿಸುವರು. ಸಮಾಜ ಸೇವಾ ಸಂಘದ ಅಧ್ಯಕ್ಷ ಕೇಶವ ಆಚಾರ್ಯ ಮುದ್ರಾಡಿ, ಮಹಿಳಾ ಮಂಡಳಿ ಅಧ್ಯಕ್ಷೆ ಪ್ರೇಮಾ ಎಂ. ಆಚಾರ್ಯ, ದೊಂಡೆರಂಗಡಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಕರುಣಾಕರ ಜೆ. ಆಚಾರ್ಯ, ಅಮೃತ ಭಾರತಿ ವಿದ್ಯಾಕೇಂದ್ರದ ಶಿಕ್ಷಕಿ ಸೌಮ್ಯಾ ಡಿ. ಭಾಗವಹಿಸುವರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜೇಶ ಆಚಾರ್ಯ ಪರ್ಕಳ, ಶ್ರೀಕಾಂತ ಆಚಾರ್ಯ ಕಲ್ಚಪ್ರ ಬಾರ್ಕೂರು, ದಾಮೋದರ ಆಚಾರ್ಯ ಯರ್ಲಪಾಡಿ, ಸಾನಿಧ್ಯ ಆಚಾರ್ಯ ಪೆರ್ಡೂರು, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಎಚ್.ಎಂ. ಶಶಿಶಂಕರ್‌ ಆಚಾರ್ಯ ಅವರಿಗೆ ಸನ್ಮಾನ ನಡೆಯಲಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.