ADVERTISEMENT

ಹೆಬ್ರಿ |ಬೀದಿ ನಾಟಕ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 6:08 IST
Last Updated 29 ಡಿಸೆಂಬರ್ 2025, 6:08 IST
ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬೀದಿನಾಟಕದ ಮೂಲಕ ಆರೋಗ್ಯ ಶಿಕ್ಷಣ ಜಾಗೃತಿ ಮೂಡಿಸಲಾಯಿತು
ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬೀದಿನಾಟಕದ ಮೂಲಕ ಆರೋಗ್ಯ ಶಿಕ್ಷಣ ಜಾಗೃತಿ ಮೂಡಿಸಲಾಯಿತು   

ಹೆಬ್ರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಮತ್ತು ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಬೀದಿನಾಟಕದ ಮೂಲಕ ‘ಆರೋಗ್ಯ ಶಿಕ್ಷಣ ಜಾಗೃತಿ’ಗಾಗಿ ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಹೆಬ್ರಿ ಆರೋಗ್ಯ ಕೇಂದ್ರದ ಚಿದಾನಂದ ಸ್ವಾಮಿ ಮಾತನಾಡಿ, ಮಕ್ಕಳ ಆರೋಗ್ಯದ ರಕ್ಷಣೆ, ಮಾನಸಿಕ ಸದೃಢತೆ ಕಾಪಾಡಿಕೊಳ್ಳಲು ಮಾಹಿತಿ ನೀಡಿದರು. ಎಸ್‌.ಆರ್‌. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್, ಎಸ್‌.ಆರ್‌. ಪಬ್ಲಿಕ್ ಸ್ಕೂಲಿನ ಉಪಪ್ರಾಂಶುಪಾಲ ದೀಪಕ್ ಎನ್., ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹೆಬ್ರಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬೀದಿನಾಟಕದ ಮೂಲಕ ಆರೋಗ್ಯ ಶಿಕ್ಷಣ ಜಾಗೃತಿ ಮೂಡಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT