ಬ್ರಹ್ಮಾವರ: ಜಿಲ್ಲಾ ಮೊಗವೀರ ಯುವ ಸಂಘಟನೆ, ಉಡುಪಿ ಅಂಬಲಪಾಡಿಯ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನೇತೃತ್ವದಲ್ಲಿ ಬ್ರಹ್ಮಾವರ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ ಹಿಂದುಳಿದ ಮೊಗವೀರ ಸಮುದಾಯದ ದಂಪತಿಗಳಿಗೆ ಜಿ. ಶಂಕರ್ ಧನಸಹಾಯ ವಿತರಿಸಿದರು.
ಕೋಟ ಗೀತಾನಂದ ಫೌಂಡೇಷನ್ ಪ್ರವರ್ತಕ ಆನಂದ ಸಿ. ಕುಂದರ್, ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಜಯಂತ ಅಮೀನ್, ವರದರಾಜ ಬಂಗೇರ, ಮೊಗವೀರ ಯುವ ಸಂಘಟನೆ ನಿಕಟಪೂರ್ವ ಅಧ್ಯಕ್ಷ ರಾಜೇಂದ್ರ ಸುವರ್ಣ, ಬಾರ್ಕೂರು ಬೆಣ್ಣೆಕುದ್ರು ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷ ಸತೀಶ ಅಮೀನ್, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಶಾಖಾಧ್ಯಕ್ಷ ಉದಯ ಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.