ADVERTISEMENT

ಉಡುಪಿ: ಸರ್ಕಾರದ ಆದೇಶವಿದ್ದರೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 5:25 IST
Last Updated 7 ಫೆಬ್ರುವರಿ 2022, 5:25 IST
ಸರ್ಕಾರದ ಆದೇಶವಿದ್ದರೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು
ಸರ್ಕಾರದ ಆದೇಶವಿದ್ದರೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು   

ಉಡುಪಿ: ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ ಸೋಮವಾರ ಉಡುಪಿ ಸರ್ಕಾರಿ ಬಾಲಕಿಯರ ಕಾಲೇಜಿಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದಿದ್ದಾರೆ.

ತರಗತಿಯಲ್ಲಿ ಹಿಜಾಬ್‌ಗೆ ಅನುಮತಿ ಕೋರಿ ನ್ಯಾಯಾಲಯದ‌ ಮೊರೆ ಹೋಗಿದ್ದೇವೆ. ತೀರ್ಪು ಬರುವವರೆಗೂ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುವುದಾಗಿ ವಿದ್ಯಾರ್ಥಿನಿಯರು ತಿಳಿಸಿದ್ದಾರೆ.

ಹೈಕೋರ್ಟ್‌ನಲ್ಲಿ ತೀರ್ಪು ನಮ್ಮ ಪರವಾಗಿ ಬರುವ ವಿಶ್ವಾಸವಿದೆ. ಬರದಿದ್ದರೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧರಿಸುತ್ತೇವೆ. ಹಿಜಾಬ್ ಧರಿಸುವುದು ಸಂವಿಧಾನ ನೀಡಿರುವ ಹಕ್ಕಾಗಿದ್ದು ಯಾವುದೇ ಕಾರಣಕ್ಕೂ ಮೊಟಕುಗೊಳಿಸಲು ಬಿಡುವುದಿಲ್ಲ ಎಂದು ವಿದ್ಯಾರ್ಥಿನಿಯರು ಸ್ಪಷ್ಟ ಪಡಿಸಿದರು.

ADVERTISEMENT

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರ್ಬಂಧಿಸಲಾಗಿದ್ದು, ವಿದ್ಯಾರ್ಥಿಯರು ಕಾಲೇಜು ಆವರಣದಲ್ಲಿ ಕುಳಿತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.