ADVERTISEMENT

ಹಿಂದೂಗಳ ಹತ್ಯೆಗೆ ತಡೆಗೆ ಕೇಂದ್ರ ಗ್ರಹಸಚಿವರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 16:04 IST
Last Updated 27 ಸೆಪ್ಟೆಂಬರ್ 2022, 16:04 IST
ರಾಷ್ಟ್ರದಾದ್ಯಂತ ಹಿಂದೂಗಳ ಹಾಗೂ ಹಿಂದೂ ಕಾರ್ಯಕರ್ತರ ನಿರಂತರ ಹತ್ಯೆಗಳನ್ನು ನಡೆಸುತ್ತಿರುವವರ ವಿರುದ್ಧ ಯುಎಪಿಎ ಕಾಯ್ದೆಯ ಅಸ್ತ್ರ ಪ್ರಯೋಗಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ರಾಷ್ಟ್ರದಾದ್ಯಂತ ಹಿಂದೂಗಳ ಹಾಗೂ ಹಿಂದೂ ಕಾರ್ಯಕರ್ತರ ನಿರಂತರ ಹತ್ಯೆಗಳನ್ನು ನಡೆಸುತ್ತಿರುವವರ ವಿರುದ್ಧ ಯುಎಪಿಎ ಕಾಯ್ದೆಯ ಅಸ್ತ್ರ ಪ್ರಯೋಗಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.   

ಉಡುಪಿ: ರಾಷ್ಟ್ರದಾದ್ಯಂತ ಹಿಂದೂಗಳ ಹಾಗೂ ಹಿಂದೂ ಕಾರ್ಯಕರ್ತರ ನಿರಂತರ ಹತ್ಯೆಗಳನ್ನು ನಡೆಸುತ್ತಿರುವವರ ವಿರುದ್ಧ ಯುಎಪಿಎ ಕಾಯ್ದೆಯ ಅಸ್ತ್ರ ಪ್ರಯೋಗಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಕೇಂದ್ರದ ಗೃಹಸಚಿವರಿಗೆ ಮನವಿ ಸಲ್ಲಿಸಲಾಯಿತು.

ಹಿಂದೂಗಳ ಮೇಲೆ ನಡೆಯುತ್ತಿರುವ ಜಿಹಾದಿ ಚಟುವಟಿಕೆಗಳಿಗೆ ಹಣ ಎಲ್ಲಿಂದ ಬರುತ್ತಿದೆ ಎಂಬ ಬಗ್ಗೆ ತನಿಖೆಯಾಗಬೇಕು. ಕೃತ್ಯಕ್ಕೆ ಪ್ರಚೋದಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು. ಹಿಂದೂಗಳ ಕೊಲೆಗೆ ಪಿತೂರಿ, ತರಬೇತಿ, ಆಶ್ರಯ, ಸೈದ್ಧಾಂತಿಕ ನಿರ್ದೇಶನ ನೀಡುವಲ್ಲಿ ಭಾಗಿಯಾಗಿರುವ ಮುಸ್ಲಿಂ ಮುಖಂಡರು, ಧರ್ಮಗುರುಗಳು, ಸಂಘಟನೆಗಳ ವಿರುದ್ಧ ಸಂಘಟಿತ ಅಪರಾಧ ಕಾಯ್ದೆಯಡಿ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಹಿಂದೂಗಳ ಹತ್ಯೆಗಳ ಪ್ರಕರಣಗಳನ್ನು ವಿಚಾರಣೆ ನಡೆಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕು. ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸಂಸ್ಥೆಗಳನ್ನು ಮುಚ್ಚಬೇಕು. ಅಂತರರಾಷ್ಟ್ರೀಯ ಮಟ್ಟದ ಷಡ್ಯಂತ್ರ ಇದೆಯೇ ಎಂಬ ಬಗ್ಗೆ ಕೂಲಂಕಷ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ADVERTISEMENT

ಈ ಸಂದರ್ಭ ಸಮಿತಿಯ ರಾಮಕೃಷ್ಣ ಶೆಟ್ಟಿ, ಹರಿಪ್ರಸಾದ್, ರಮಾನಂದ ಚಾತ್ರ ಹಾಗೂ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.