ADVERTISEMENT

240 ಫಲಾನುಭವಿಗಳಿಗೆ ಮನೆ ಹಂಚಿಕೆ‌

‘ಸರ್ವರಿಗೂ ಸೂರು’ ಕಾರ್ಯಕ್ರಮದಡಿ ಸೂರಿಲ್ಲದವರಿಗೆ ಮನೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 18:42 IST
Last Updated 22 ಜೂನ್ 2021, 18:42 IST
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ‘ಸರ್ವರಿಗೂ ಸೂರು’ ಕಾರ್ಯಕ್ರಮದಡಿ ಉಡುಪಿ ನಗರಸಭಾ ವ್ಯಾಪ್ತಿಯ 240 ಫಲಾನುಭವಿಗಳಿಗೆ ಶಾಸಕ ಕೆ.ರಘುಪತಿ ಭಟ್‌ ಮನೆಗಳನ್ನು ಹಂಚಿಕೆ ಮಾಡಲಾಯಿತು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ‘ಸರ್ವರಿಗೂ ಸೂರು’ ಕಾರ್ಯಕ್ರಮದಡಿ ಉಡುಪಿ ನಗರಸಭಾ ವ್ಯಾಪ್ತಿಯ 240 ಫಲಾನುಭವಿಗಳಿಗೆ ಶಾಸಕ ಕೆ.ರಘುಪತಿ ಭಟ್‌ ಮನೆಗಳನ್ನು ಹಂಚಿಕೆ ಮಾಡಲಾಯಿತು.   

ಉಡುಪಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ‘ಸರ್ವರಿಗೂ ಸೂರು’ ಕಾರ್ಯಕ್ರಮದಡಿ ಸೋಮವಾರ ಉಡುಪಿ ನಗರಸಭಾ ವ್ಯಾಪ್ತಿಯ 240 ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಲಾಯಿತು.

ಜಿ ಪ್ಲಸ್‌ 3 ಮಾದರಿಯಲ್ಲಿ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್‌ನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ವಸತಿ ಸಮುಚ್ಛಯದಲ್ಲಿರುವ 460 ಮನೆಗಳ ಪೈಕಿ 240 ಮನೆಗಳನ್ನು ಲಾಟರಿ ಎತ್ತುವ ಮೂಲಕ ಫಲಾನುಭವಿಗಳಿಗೆ ಹಂಚಲಾಯಿತು. ಶಾಸಕ ಕೆ. ರಘುಪತಿ ಭಟ್ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ಅಂಗವಿಕಲರಿಗೆ ಹಾಗೂ ಹಿರಿಯ ನಾಗರಿಕರಿಗೆ ನೆಲ ಮಹಡಿಯ ಮನೆಗಳನ್ನು ಹಂಚಿಕೆ ಮಾಡಲಾಯಿತು.

ಈ ಸಂದರ್ಭ ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ನಗರಸಭಾ ಸದಸ್ಯೆ ವಿಜಯಲಕ್ಷ್ಮಿ, ಪೌರಾಯುಕ್ತ ಉದಯ್ ಶೆಟ್ಟಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಪ್ರಸನ್ನ ಕುಮಾರ್, ಸಹಾಯಕ ಎಂಜಿನಿಯರ್ ಶ್ರೀಪಾದ, ಬ್ಯಾಂಕ್ ಆಫ್ ಬರೋಡಾ ವಿಭಾಗೀಯ ಮ್ಯಾನೇಜರ್ ರವಿಕುಮಾರ್, ಭೀಮ್ ಶಂಕರ್, ಗುತ್ತಿಗೆದಾರ ನಿಹಾಲ್ ಭಟ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.