ADVERTISEMENT

ಗುಂಡು ಹಾರಿಸಿಕೊಂಡು ಹೊಟೆಲ್ ಉದ್ಯಮಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 17:14 IST
Last Updated 27 ಸೆಪ್ಟೆಂಬರ್ 2020, 17:14 IST
   

ಉಡುಪಿ: ಕಾರ್ಕಳ ತಾಲ್ಲೂಕಿನ ಚಿಕ್ಕಲಬೆಟ್ಟು ಗ್ರಾಮದಲ್ಲಿ ಭಾನುವಾರ ಉದ್ಯಮಿ ಸುನೀಲ್‌ ಶೆಟ್ಟಿ (45) ಎಂಬುವರು ನಾಡ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುಣೆಯಲ್ಲಿ ಹೋಟೆಲ್‌ ಉದ್ಯಮ ನಡೆಸುತ್ತಿದ್ದ ಸುನೀಲ್ ಶೆಟ್ಟಿ ಲಾಕ್‌ಡೌನ್ ಬಳಿಕ ವ್ಯವಹಾರದಲ್ಲಿ ತೀವ್ರ ನಷ್ಟ ಅನುಭವಿಸಿದ್ದರು. ಸಾಲದ ಹೊರೆ ಕೂಡ ಹೆಚ್ಚಾಗಿತ್ತು. ಆರ್ಥಿಕ ಸಂಕಷ್ಟದಿಂದ ಮನನೊಂದು ಮನೆಯ ಸಮೀಪದ ಗದ್ದೆಯಲ್ಲಿ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಸೋಮವಾರ ಪುಣೆಗೆ ತೆರಳುವುದಾಗಿ ಮನೆಯವರಿಗೆ ತಿಳಿಸಿದ್ದ ಸುನೀಲ್ ಶೆಟ್ಟಿ ಅಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.